ETV Bharat / state

ಹಾವೇರಿಯಲ್ಲಿ ಹೆಚ್ಚುತ್ತಿರುವ ಅಕ್ರಮ ಗಣಿಗಾರಿಕೆ: ಸೂಕ್ತ ಕ್ರಮಕ್ಕೆ ಒತ್ತಾಯ - ಶಿವಮೊಗ್ಗದಲ್ಲಿ ನಡೆದ ಸ್ಫೋಟ ಪ್ರಕರಣ

ಹಾವೇರಿ, ಹಿರೇಕೆರೂರು, ಬ್ಯಾಡಗಿ ಮತ್ತು ರಾಣೆಬೆನ್ನೂರು ತಾಲೂಕುಗಳಲ್ಲಿ ಕಲ್ಲುಕ್ವಾರಿಗಳದ್ದೇ ಕಾರುಬಾರು. ಸರ್ಕಾರದ ಆದೇಶ ಉಲ್ಲಂಘಿಸಿ ಸ್ಫೋಟಕ ಬಳಸಿ ಕಲ್ಲುಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಹಾವೇರಿಯಲ್ಲಿ ಹೆಚ್ಚುತ್ತಿರುವ ಅಕ್ರಮ ಗಣಿಗಾರಿಕೆ

author img

By

Published : Mar 21, 2021, 7:40 AM IST

ಹಾವೇರಿ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು, ಸರ್ಕಾರದ ಅನುಮತಿ ಪಡೆದ ಕ್ವಾರಿಗಳಿಗಿಂತ ಜಿಲ್ಲೆಯಲ್ಲಿ ಅನಧಿಕೃತ ಕ್ವಾರಿಗಳ ಸಂಖ್ಯೆಯೇ ಹೆಚ್ಚಿದೆ ಎನ್ನುವ ಆರೋಪ ಕೇಳಿಬಂದಿದೆ.

ಹಾವೇರಿಯಲ್ಲಿ ಹೆಚ್ಚುತ್ತಿರುವ ಅಕ್ರಮ ಗಣಿಗಾರಿಕೆ

ಹಾವೇರಿ, ಹಿರೇಕೆರೂರು, ಬ್ಯಾಡಗಿ ಮತ್ತು ರಾಣೆಬೆನ್ನೂರು ತಾಲೂಕುಗಳಲ್ಲಿ ಕಲ್ಲುಕ್ವಾರಿಗಳದ್ದೇ ಕಾರುಬಾರು. ಸರ್ಕಾರದ ಆದೇಶ ಉಲ್ಲಂಘಿಸಿ ಸ್ಫೋಟಕ ಬಳಿಸಿ ಕಲ್ಲುಗಣಿಗಾರಿಕೆಯನ್ನ ನಡೆಸಲಾಗುತ್ತಿದೆ ಎನ್ನಲಾಗುತ್ತಿದೆ. ಆದರೆ ಕಳೆದ ಕೆಲ ದಿನಗಳ ಹಿಂದೆ ಶಿವಮೊಗ್ಗದಲ್ಲಿ ನಡೆದ ಸ್ಫೋಟ ಪ್ರಕರಣದ ನಂತರ ಹಾವೇರಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ.

ಜಿಲ್ಲೆಯಲ್ಲಿ ಕಲ್ಲುಗಣಿಗಾರಿಕೆ ಮೇಲೆ ದಾಳಿ ಮಾಡುತ್ತಿರುವ ಪೊಲೀಸ್ ಇಲಾಖೆ, ಅಕ್ರಮ ಕಲ್ಲುಗಣಿಗಾರಿಕೆಗೆ ಬ್ರೇಕ್​ ಹಾಕುತ್ತಿದ್ದಾರೆ. ಜೊತೆಗೆ ಅಧಿಕೃತವಾಗಿರುವ 39 ಕಲ್ಲುಕ್ವಾರಿಗಳಿಗೆ ಸಹ ಸರ್ಕಾರದ ಮಾನದಂಡದಂತೆ ಗಣಿಗಾರಿಕೆ ನಡೆಸಲು ಸೂಚಿಸಲಾಗಿದೆ. ಒಂದು ವೇಳೆ ಸರ್ಕಾರದ ಮಾನದಂಡಗಳನ್ನು ಉಲ್ಲಂಘಿಸಿದರೆ ಅವರ ಅನುಮತಿ ರದ್ದುಮಾಡುವ ಎಚ್ಚರಿಕೆ ನೀಡಲಾಗಿದೆ.

ಇನ್ನು ಜಿಲ್ಲಾಡಳಿತ ಎಚ್ಚರಿಕೆ ನೀಡಿದರೂ ಸಹ ಅಕ್ರಮ ಕಲ್ಲುಗಣಿಗಾರಿಕೆ ಜಿಲ್ಲೆಯಲ್ಲಿ ನಿಂತಿಲ್ಲ. ಪೊಲೀಸ್ ಇಲಾಖೆ ಅಥವಾ ಗಣಿ ಭೂಗರ್ಭ ಇಲಾಖೆ ಅಧಿಕಾರಿಗಳು ಬಂದಾಗ ಕಲ್ಲುಕ್ವಾರಿಗಳ ಮಾಲೀಕರು ಎಚ್ಚೆತ್ತುಕೊಳ್ಳುತ್ತಾರೆ. ಅಧಿಕಾರಿಗಳು ಭೇಟಿ ನೀಡಿ ಮರಳಿದ ನಂತರ ಎಂದಿನಂತೆ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿಕೊಳ್ಳುತ್ತಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಪೊಲೀಸ್ ಇಲಾಖೆ ಈಗಾಗಲೇ ಹಲವು ಕಡೆ ದಾಳಿ ನಡೆಸಿದೆ. ಸ್ಫೋಟಕಗಳನ್ನು ಅಕ್ರಮವಾಗಿ ಸಂಗ್ರಹ ಮಾಡಿರುವ ಸ್ಥಳಗಳ ಮೇಲೆ ದಾಳಿ ನಡೆಸಿ ಐದು ಪ್ರಕರಣ ದಾಖಲಿಸಿಕೊಂಡಿದೆ. ಬಹುತೇಕ ಕ್ವಾರಿಗಳು ಪ್ರಭಾವಿ ವ್ಯಕ್ತಿಗಳಿಗೆ ಸೇರಿವೆ ಎನ್ನಲಾಗಿದ್ದು, ಜಿಲ್ಲೆಯಲ್ಲಿ ಅನಧಿಕೃತ ಕಲ್ಲುಗಣಿಗಾರಿಕೆಗೆ ಪೊಲೀಸ್ ಇಲಾಖೆ ಆದಷ್ಟು ಬೇಗ ಕಡಿವಾಣ ಹಾಕಲಿ ಎಂದು ಪರಿಸರಪ್ರೇಮಿಗಳು ಒತ್ತಾಯಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.