ETV Bharat / state

ಕಾಮಗಾರಿ ಮುಗಿದರೂ ಉದ್ಘಾಟನೆ ಭಾಗ್ಯ ಕಾಣದ ಇಂದಿರಾ ಕ್ಯಾಂಟೀನ್ - ಇಂದಿರಾ ಕ್ಯಾಂಟೀನ್​ ಉದ್ಘಾಟನೆಗೆ ಅಧಿಕಾರಿಗಳ ಹಿಂದೇಟು

ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಹಳೆ ನಗರಸಭಾ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್​ ಇನ್ನೂ ಉದ್ಘಾಟನೆಗೊಂಡಿಲ್ಲ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ತಲೆಕೆಡಿಕೊಳ್ಳದೆ ಇರೋದ್ರಿಂದ ಕೈಗೆ ಬಂದ ತುತ್ತು ಬಾಯಿಗೆ ಬರುತ್ತಿಲ್ಲ ಎಂಬಂತಾಗಿದೆ.

Indira canteen not opened in Ranebennuru
ರಾಣೆಬೆನ್ನೂರು
author img

By

Published : Oct 20, 2020, 4:46 PM IST

ರಾಣೆಬೆನ್ನೂರು: ಬಡವರು ಮತ್ತು ಕಾರ್ಮಿಕರಿಗಾಗಿ ಅಂದಿನ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ವ್ಯವಸ್ಥೆಗೆ ರಾಣೆಬೆನ್ನೂರು ನಗರದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆಯಾದ್ರೂ ಇನ್ನೂ ಉದ್ಘಾಟನೆಗೊಂಡಿಲ್ಲ.

ರಾಣೆಬೆನ್ನೂರು
ಹಾವೇರಿ ನಗರದಲ್ಲಿ ಈಗಾಗಲೇ ಕ್ಯಾಂಟೀನ್ ಉದ್ಘಾಟನೆಗೊಂಡಿದೆ. ಆದರೆ, ರಾಣೆಬೆನ್ನೂರು ನಗರದ ಹಳೆ ನಗರಸಭಾ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗಿರುವ ಈ ಕ್ಯಾಂಟೀನ್​ಗೆ ಉದ್ಘಾಟನೆ ಭಾಗ್ಯ ಸಿಗುತ್ತಿಲ್ಲ. ರಾಜ್ಯ ಸರ್ಕಾರ ಕ್ಯಾಂಟೀನ್ ಕಟ್ಟಡ ನಿರ್ಮಾಣ ಮಾಡಲು ಕೆಇಎಫ್‌ ಸಂಸ್ಥೆಗೆ ಗುತ್ತಿಗೆ ನೀಡಿದೆ. ಕಟ್ಟಡಕ್ಕೆ 28 ಲಕ್ಷ ರೂ. ಹಾಗೂ ಅಡುಗೆ ಕೋಣೆ ನಿರ್ಮಾಣಕ್ಕೆ 48 ಲಕ್ಷ ರೂ. ಅನುದಾನ ಬಳಸಿಕೊಂಡು ನಿರ್ಮಾಣ ಮಾಡಲಾಗಿದೆ. ಪ್ರತಿ ಕ್ಯಾಂಟೀನ್‌ನಿಂದ ಒಂದು ಅವಧಿಗೆ ಗರಿಷ್ಠ 500 ಜನರಿಗೆ 5 ರೂ.ಗೆ ಉಪಹಾರ, 10 ರೂ.ಗೆ ಊಟ ದೊರೆಯಲಿದೆ.
ಆದರೆ, ಜನಪ್ರತಿನಿಧಿಗಳ ನಿರ್ಲಕ್ಷ್ಯ ಹಾಗೂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಇಂದಿರಾ ಕ್ಯಾಂಟಿನ್ ಉದ್ಘಾಟನೆ ಆಗುತ್ತಿಲ್ಲ. ಕ್ಯಾಂಟೀನ್ ಕಾಮಗಾರಿ ಪೂರ್ಣವಾಗಿದ್ದು, ಈಗಾಗಲೇ ಅಡುಗೆ ಸಾಮಾನು ಹಾಗೂ ಇತರೆ ವಸ್ತುಗಳನ್ನು ಜೋಡಿಸಲಾಗಿದೆ. ಆದರೆ ಉದ್ಘಾಟನೆ ಮಾಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿರುವುದು ಯಾಕೆ? ಎಂಬುದು ಗೊತ್ತಾಗುತ್ತಿಲ್ಲ ಎನ್ನುತ್ತಾರೆ ಸ್ಥಳೀಯರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.