ಹಾವೇರಿ: ಪಿಎಸ್ಐ ಜೀಪ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದ ಹೊರವಲಯದಲ್ಲಿರೋ ಮಾಗೋಡ ರಸ್ತೆಯಲ್ಲಿ ನಡೆದಿದೆ.
ಸವಿತಾ ಶಶಿಮಠ (28) ಮೃತ ಯುವತಿ. ಜೀಪ್ನಲ್ಲಿ ರಾಣೇಬೆನ್ನೂರು ಗ್ರಾಮೀಣ ಠಾಣೆ ಪಿಎಸ್ಐ ಸುನೀಲಕುಮಾರ್, ಕೊಲೆ ಪ್ರಕರಣದ ಆರೋಪಿ ಪತ್ತೆಗಾಗಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಈ ಕುರಿತು ರಾಣೇಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.