ಹಾವೇರಿ: ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸೂರಿನಲ್ಲಿ ಕಾರ್ಗಿಲ್ ವಿಜಯೋತ್ಸವದ 20ನೇ ವರ್ಷಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಮಾಸೂರಿನ ಶ್ರೀವಿವೇಕಾನಂದ ವಿದ್ಯಾಲಯದ ಮಕ್ಕಳು ತಿರಂಗ ಹಿಡಿದು ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದರು.
ಜಾಥಾ ಉದ್ದಕ್ಕೂ ಸೈನಿಕರಿಗೆ ಜಯಘೋಷ ಕೂಗಿದರು. ನಂತರ ಬಸ್ ನಿಲ್ದಾಣದ ವೃತ್ತದಲ್ಲಿ ಜಮಾಯಿಸಿ, ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಸೈನಿಕರಿಗೆ ಶ್ರದ್ದಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರಗೀತೆ ಹಾಡುವ ಮೂಲಕ ವಿದ್ಯಾರ್ಥಿಗಳು ಸೈನಿಕರಿಗೆ ಗೌರವ ವಂದನೆ ಸಲ್ಲಿಸಿದರು.
ವಿವೇಕಾನಂದ ವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕರು ಸೇರಿ ಗ್ರಾಮಸ್ಥರು ಉಪಸ್ಥಿತರಿದ್ದರು.