ETV Bharat / state

'ಕೈ ಮುಗಿದು ಏರು, ಇದು ಹಿರೇಕೆರೂರ ಘಟಕದ ಕನ್ನಡದ ತೇರು': ಸರ್ಕಾರಿ ಬಸ್​ ಚಾಲಕ, ನಿರ್ವಾಹಕರಿಂದ ವರ್ಷಪೂರ್ತಿ ಕನ್ನಡ ರಾಜ್ಯೋತ್ಸವ!

author img

By ETV Bharat Karnataka Team

Published : Nov 8, 2023, 11:33 AM IST

Updated : Nov 8, 2023, 12:50 PM IST

ವಿಭಿನ್ನವಾಗಿ ಬಸ್‌ ಅಲಂಕರಿಸುವ ಮೂಲಕ ಚಾಲಕ ಮತ್ತು ನಿರ್ವಾಹಕ ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಿದ್ದಾರೆ. ಅಷ್ಟೇ ಅಲ್ಲ..

ಸರ್ಕಾರಿ ಬಸ್​ನಲ್ಲಿ ವರ್ಷವಿಡೀ ಕರ್ನಾಟಕ ರಾಜ್ಯೋತ್ಸವ

ಕೈ ಮುಗಿದು ಏರು, ಇದು ಹಿರೇಕೆರೂರ ಘಟಕದ ಕನ್ನಡದ ತೇರು

ಹಾವೇರಿ: ಜಿಲ್ಲೆಯ ಹಿರೇಕೆರೂರು ಕೆಎಸ್​ಆರ್​ಟಿಸಿ ಡಿಪೋದಲ್ಲಿ ಕಾರ್ಯನಿರ್ವಹಿಸುವ ನಿರ್ವಾಹಕ ಮತ್ತು ಚಾಲಕ ಕಳೆದ ನಾಲ್ಕು ವರ್ಷಗಳಿಂದ ವರ್ಷವಿಡೀ ವಿಭಿನ್ನವಾಗಿ ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಾ ಬಂದಿದ್ದಾರೆ. ನಿರ್ವಾಹಕ ಶಶಿಕುಮಾರ್ ಬೋಸಲೆ ಮತ್ತು ಚಾಲಕ ಯಲ್ಲಪ್ಪ ಎಂಬವರು ಸಾರಿಗೆ ಇಲಾಖೆಯ ಬಸ್‌ ಅನ್ನು ಸಂಪೂರ್ಣ ಕನ್ನಡಮಯ ಮಾಡುವ ಮೂಲಕ ಕನ್ನಡಾಭಿಮಾನ ಬೆಳೆಸುತ್ತಿದ್ದಾರೆ.

ಇವರು ಪ್ರತಿ ವರ್ಷ ಒಂದೊಂದು ರೀತಿಯಲ್ಲಿ ತಮ್ಮ ಸ್ವಂತ ಹಣದಿಂದಲೇ ರಾಜ್ಯೋತ್ಸವ ಆಚರಿಸುತ್ತಿದ್ದಾರೆ. ಈ ಬಾರಿ ಪರಿಸರಪ್ರೇಮ ಸಾರುವ ನುಡಿಗಳು ಮತ್ತು ಜಲಸಂರಕ್ಷಣೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಪ್ರಯಾಣಿಕರಿಗೆ ಕನ್ನಡದ ಸಾಹಿತಿಗಳು, ಪ್ರೇಕ್ಷಣೀಯ ಸ್ಥಳಗಳು, ವೀರ ವನಿತೆಯರು ಸೇರಿದಂತೆ ವಿವಿಧ ವಲಯಗಳಲ್ಲಿ ಸೇವೆ ಸಲ್ಲಿಸಿದ ರಾಜ್ಯದ ಮಹನೀಯರ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ.

ಬಸ್ ಹೊರಗಿನ ಅಲಂಕಾರವಂತೂ ದೂರದಿಂದಲೇ ಕನ್ನಡಾಭಿಮಾನಿಗಳನ್ನು ಆಕರ್ಷಿಸುವಂತಿದೆ. ಹೊರಭಾಗದಲ್ಲಿ ಭುವನೇಶ್ವರಿ ದೇವಿಯ ಭಾವಚಿತ್ರವಿದೆ. ದಿನಕ್ಕೆ ಮೂರು ಬಾರಿ ತಾಯಿಗೆ ಪೂಜೆ ಸಲ್ಲಿಸಲಾಗುತ್ತದೆ. ಕನ್ನಡಕ್ಕಾಗಿ ದುಡಿದ ಸಾಧಕರ ಭಾವಚಿತ್ರಗಳು ಬಸ್‌ನಲ್ಲಿ ಹೊರಭಾಗದಲ್ಲಿ ಹಾಕಿದ್ದಾರೆ. ರಾಜ್ಯ ಹಾಗು ಹಾವೇರಿ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳ ಫೋಟೋಗಳನ್ನು ಬಸ್ ಹೊರಭಾಗದಲ್ಲಿ ಅಂಟಿಸಲಾಗಿದೆ. ಕನ್ನಡರತ್ನ ಪ್ರಶಸ್ತಿ ವಿಜೇತರು, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು, ಕನ್ನಡ ನಾಡನ್ನು ಆಳಿದ ರಾಜಮನೆತನಗಳು, ಕನ್ನಡದ ಖ್ಯಾತ ನಟ-ನಟಿಯರ ಮಾಹಿತಿ ಸೇರಿದಂತೆ ವಿವಿಧ ಸಂಗತಿಗಳನ್ನು ಬಸ್‌ನಲ್ಲಿ ನೋಡಬಹುದು.

ಬಸ್ ಒಳಗಡೆ ಕಾಲಿಟ್ಟರೆ ಗ್ರಂಥಾಲಯದೊಳಗೆ ಹೊಕ್ಕ ಅನುಭವ. ಪ್ರತಿ ಆಸನಕ್ಕೊಂದು ಪುಸ್ತಕವನ್ನು ಇಡಲಾಗಿದೆ. ಪ್ರತಿ ಆಸನದ ಮೇಲೆ ಕನ್ನಡ ಸ್ವರಗಳು, ವ್ಯಂಜನಗಳಿವೆ. ಪ್ರತಿ ಆಸನದ ಹಿಂದೆ ಕನ್ನಡ ಭಾಷೆಯ ಹಿರಿಮೆಯನ್ನು ಬರೆಯಲಾಗಿದೆ. ಮಾತೃಭಾಷೆಯ ಬಗ್ಗೆ ಕವಿಗಳ ಹೇಳಿಕೆ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಮಾಹಿತಿ, ರಾಜ್ಯದ 224 ತಾಲೂಕುಗಳ 31 ಜಿಲ್ಲೆಗಳ ಬಗ್ಗೆ ಮಾಹಿತಿ ಸಿಗುತ್ತದೆ. ಧ್ವನಿವರ್ಧಕದ ಮೂಲಕ ಕನ್ನಡ ಸಾಹಿತ್ಯಾಭಿಮಾನ, ನಾಡಿನ ಶ್ರೇಷ್ಠತೆ ಸಾರುವ ಗೀತೆಗಳನ್ನು ಬಸ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ.

"ಹಿರೇಕೆರೂರು ವಿಭಾಗದಲ್ಲಿ ಕಳೆದ​ 9 ವರ್ಷದಿಂದ ನಿರ್ವಾಹಕನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಳೆದ ನಾಲ್ಕು ವರ್ಷದಿಂದ ಪ್ರತಿವರ್ಷ ವಿಭಿನ್ನವಾಗಿ ಬಸ್‌ ಅನ್ನು ಅಲಂಕರಿಸುವ ಮೂಲಕ ರಾಜ್ಯೋತ್ಸವ ಆಚರಿಸುತ್ತಿದ್ದೇವೆ. ಈ ರೀತಿ ಆಚರಿಸಲು ನನ್ನ ಸ್ನೇಹಿತರು, ಪ್ರಯಾಣಿಕರು, ಸಿಬ್ಬಂದಿ ವರ್ಗ ಮತ್ತು ಕುಟುಂಬಸ್ಥರು ಪ್ರೋತ್ಸಾಹ ನೀಡುತ್ತಿದ್ದಾರೆ" ಎಂದು ನಿರ್ವಾಹಕ ಶಶಿಕುಮಾರ್ ಬೋಸಲೆ ತಿಳಿಸಿದರು. "ಶಶಿಕುಮಾರ್ ಕಾರ್ಯಕ್ಕೆ ಕೈಜೋಡಿಸುವುದರ ಜೊತೆಗೆ ಅವರು ಯಾವ ರೀತಿ ಹೇಳುತ್ತಾರೋ ಆ ರೀತಿ ಬಸ್ ಅಲಂಕರಿಸುವುದು ನನ್ನ ಕೆಲಸ" ಎನ್ನುತ್ತಾರೆ ಚಾಲಕ ಯಲ್ಲಪ್ಪ.

ಇದನ್ನೂ ಓದಿ: ಡ್ರೋನ್ ಕ್ಯಾಮರಾದಲ್ಲಿ ಕುಂದಾನಗರಿ ರಾಜ್ಯೋತ್ಸವ ವೈಭವ ಸೆರೆ: 5 ಲಕ್ಷಕ್ಕೂ ಅಧಿಕ ಮಂದಿ ಭಾಗಿ- ವಿಡಿಯೋ

Last Updated : Nov 8, 2023, 12:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.