ರಾಣೇಬೆನ್ನೂರು : ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತಹಶೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ
ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರು ಕೃಷಿಯನ್ನು ನಂಬಿ ಜೀವನ ನಡೆಸುತ್ತಿದ್ದಾರೆ. ಇವರನ್ನು ಮಾನ್ಯ ಮುಖ್ಯಮಂತ್ರಿಗಳು ಬೀದಿಗೆ ತಳ್ಳಲು ಮುಂದಾಗಿರುವುದು ಖಂಡನಾರ್ಹ. ಸರ್ಕಾರ ರೈತರ ಪರ ಕೆಲಸ ಮಾಡಬೇಕೇ ಹೊರತು ಉಳ್ಳವರ ಏಜೆಂಟರಂತೆ ವರ್ತಿಸಬಾರದು ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ತಹಶೀಲ್ದಾರ್ ಬಸನಗೌಡ ಕೋಟೂರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.