ರಾಣೆಬೆನ್ನೂರು: ಕ್ಷೇತ್ರದಲ್ಲಿ ಉಪ ಚುನಾವಣೆ ಎದುರಾಗಿದೆ. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿದ್ದು, ಜಯ ಗಳಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಬಿ.ಕೋಳಿವಾಡ ಹೇಳಿದರು.
ನಗರದ ತಹಶೀಲ್ದಾರ್ ಕಚೇರಿಯಲ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿ ಮಾತನಾಡಿದ ಅವರು, ಕ್ಷೇತ್ರದ ಜನತೆ ಒತ್ತಾಯದ ಮೇರೆಗೆ ಈ ಉಪ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ. ಅವರು ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆಯಿದೆ. ಇನ್ನು ಬಿಜೆಪಿ ಅಭ್ಯರ್ಥಿ ಮೇಲೆ ದಾಖಲಾಗಿರುವ ಕೇಸಿನ ಬಗ್ಗೆ ನನಗೆ ಮಾಹಿತಿಯಿಲ್ಲ. ಮಾಹಿತಿ ಇಲ್ಲದೆ ಮಾತನಾಡಿದರೆ ತಪ್ಪಾಗುತ್ತದೆ ಎಂದರು.
ರಾಣೆಬೆನ್ನೂರು ಕ್ಷೇತ್ರದ ಜನತೆ ಈ ಬಾರಿ ನೂರಕ್ಕೆ ನೂರರಷ್ಟು ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ. ಈ ಬಾರಿ ಗೆಲವು ಪಡೆದರೆ ಕ್ಷೇತ್ರದ ಕೆಲಸ ಹಾಗೂ ಜನರ ಸೇವೆ ಮಾಡುವ ಕನಸು ಹೊಂದಿದ್ದೇನೆ. ಇದು ನನ್ನ ಕೊನೆಯ ಸ್ಪರ್ಧೆ ಅಂತಾ ಈಗಾಗಲೇ ತಿಳಿಸಿದ್ದೇನೆ ಎಂದರು.