ಹಾವೇರಿ: ಕೆಎಸ್ಆರ್ಟಿಸಿ ಚಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ನಡೆದಿದೆ.
ಮಂಜುನಾಥ ಬುರ್ಲಿ 32 ವರ್ಷ ಆತ್ಮಹತ್ಯೆ ಮಾಡಿಕೊಂಡಿರುವ ಚಾಲಕ ಕಂ ನಿರ್ವಾಹಕ. ಈತ ಬೆಳಗಾವಿಯ ಸವದತ್ತಿ ತಾಲೂಕಿನ ಕರಿಕಟ್ಟಿ ಗ್ರಾಮದ ನಿವಾಸಿ. ಕಳೆದ ಎರಡು ವರ್ಷಗಳಿಂದ ಹಾನಗಲ್ ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ತಾನು ವಾಸವಿದ್ದ ಬಾಡಿಗೆ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.
ಸ್ಥಳಕ್ಕೆ ಹಾನಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.