ಹಾವೇರಿ : ಜಿಲ್ಲೆಯಲ್ಲಿ ಎರಡು ನಗರ ಸ್ಥಳೀಯ ಸಂಸ್ಥೆಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಮತದಾನ ಶಾಂತಿಯುತವಾಗಿ ನಡೆದಿದೆ.
ಜಿಲ್ಲೆಯ ಬ್ಯಾಡಗಿ ಪುರಸಭೆಯ 23 ವಾರ್ಡ್ಗಳು ಮತ್ತು ಶಿಗ್ಗಾಂವಿ ಪುರಸಭೆಯ 23 ವಾರ್ಡ್ಗಳಿಗೆ ಮತದಾನ ನಡೆಯುತ್ತಿದ್ದು, ಬೆಳಗ್ಗೆಯಿಂದಲೇ ಮತದಾರರು ಹುರುಪಿನಿಂದ ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬ್ಯಾಡಗಿಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮತ್ತು ಪಕ್ಷೇತರರು ಸೇರಿ ಒಟ್ಟು 79 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಶಿಗ್ಗಾಂವಿ ಪುರಸಭೆಗೆ ಆಗಮಿಸಿದ ಶಾಸಕ ಬಸವರಾಜ ಬೊಮ್ಮಾಯಿ, ವಾರ್ಡ್ ನಂಬರ್ 14ರಲ್ಲಿರುವ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು. ಇನ್ನು ಶಿಗ್ಗಾಂವಿಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮತ್ತು ಪಕ್ಷೇತರರು ಸೇರಿದಂತೆ ಒಟ್ಟು 95 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮತದಾನದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.