ಹಾವೇರಿ: ತಾಲೂಕಿನ ಗುತ್ತಲ ಪಟ್ಟಣದಲ್ಲಿ ಸೋಮವಾರದ ಸಂತೆಗೆ ಬಂದಿದ್ದವರಿಗೆ ಪಿಎಸ್ಐ ಸಿದ್ದಾರೂಢ ಬಡಿಗೇರ ಬಿಸಿ ಮುಟ್ಟಿಸಿದ್ದಾರೆ.
ಪಟ್ಟಣದ ಎಪಿಎಂಸಿ ಮಾರ್ಕೆಟ್ನಲ್ಲಿ ತರಕಾರಿ ಮಾರಾಟ ಮಾಡಲು ಬಂದಿದ್ದ ವ್ಯಾಪಾರಿಗಳು, ನಿಯಮ ಉಲ್ಲಂಘಿಸಿ ಗುಂಪು ಗುಂಪಾಗಿ ಕುಳಿತು ಸಂತೆ ಆರಂಭಿಸಲು ಮುಂದಾಗಿದ್ದರು. ಇದನ್ನು ಗಮನಿಸಿದ ಪಿಎಸ್ಐ ಸಿದ್ದಾರೂಢ ಬಡಿಗೇರ, ಪೈಪ್‌ನಿಂದ ಹೊಡೆದು ಗುಂಪು ಚದುರಿಸಿದ್ದಾರೆ.
ವಾಹನ ಸವಾರರನ್ನು ತಪಾಸಣೆ ನಡೆಸುತ್ತಿರುವ ಪೊಲೀಸರು, ಬೈಕ್, ಕಾರಿನಲ್ಲಿ ಓಡಾಡದಂತೆ ಎಚ್ಚರಿಕೆ ನೀಡಿ ವಾಪಸ್ ಮನೆಗೆ ಕಳುಹಿಸುತ್ತಿದ್ದಾರೆ. ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಡಿವೈಎಸ್ಪಿ ಶಂಕರ ಮಾರಿಹಾಳ ನೇತೃತ್ವದಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಇದೇ ವೇಳೆ ಒಂದು ಬೈಕ್ ಹಾಗೂ ಒಂದು ಕಾರನ್ನು ಸೀಜ್ ಮಾಡಿದ್ದಾರೆ.
ಓದಿ: ಇದು ಜನರಿಗೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ಡೌನ್: ಹೆಚ್ಡಿಕೆ ಗರಂ