ಹಾವೇರಿ : ತಾಲೂಕಿನ ಬಸಾಪುರ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪ್ರೇಮಿಗಳಿಬ್ಬರ ಮೃತದೇಹ ಪತ್ತೆಯಾಗಿವೆ.
ಪ್ರವೀಣ್ ಬಾಗಿಲದ (24) ನೇತ್ರಾ ಬಾಳಿಕಾಯಿ (18) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು ಎಂದು ತಿಳಿದು ಬಂದಿದೆ. ನಾಲ್ಕು ದಿನಗಳ ಹಿಂದೆ ಮೃತ ಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತ ದೇಹಗಳ ಬಳಿ ಬಿಯರ್ ಬಾಟಲಿ, ವಿಷದ ಬಾಟಲಿ, ಚಾಕು ಹಾಗೂ ಒಂದು ಬೈಕ್ ಪತ್ತೆಯಾಗಿದೆ.
ಸದ್ಯ ಸ್ಥಳಕ್ಕೆ ಗುತ್ತಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಂತರವಷ್ಟೆ ಘಟನೆಗೆ ನಿಖರ ಕಾರಣ ತಿಳಿದು ಬರಲಿದೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.