ಹಾವೇರಿ : ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತು. ತಾಲೂಕು ಪಂಚಾಯತ್ ಕಚೇರಿಯಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಜನಸಂಪರ್ಕ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಗೂ ಮುನ್ನ ಕಿತ್ತೂರು ರಾಣಿಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮುಖಂಡರು ನಂತರ ಪ್ರತಿಭಟನಾ ಮೆರವಣಿಗೆ ನಡೆಸಿದರು. ರಾಣಿ ಚೆನ್ನಮ್ಮ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಾಲೂಕು ಪಂಚಾಯತ್ ಕಚೇರಿವರೆಗೂ ನಡೆಯಿತು. ಜಾಂಜ್ ಮೇಳ ಹಲಗೆ ಸದ್ದಿನೊಂದಿಗೆ ಹೆಜ್ಜೆ ಹಾಕಿದ ಪ್ರತಿಭಟನಾಕರರು ಮಾದಿಗ ಸಮಾಜ ಪರ ಘೋಷಣೆ ಹಾಕಿದರು.
ನಂತರ ಸಿಎಂ ಬಸವರಾಜ್ ಬೊಮ್ಮಾಯಿ ಜನಸಂಪರ್ಕ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾದಿಗ ಹೋರಾಟ ಸಮಿತಿಯ ಸದಸ್ಯರು ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಜಾರಿಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ನಂತರ ಶಿಗ್ಗಾಂವಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಇದನ್ನೂ ಓದಿ : ಗೋಲ್ಡ್ ರಿಕವರಿ ಹೆಸರಿನಲ್ಲಿ ಕಿರುಕುಳ ಆರೋಪ: ತಮಿಳುನಾಡು ಪೊಲೀಸರನ್ನು ಕೂಡಿಹಾಕಿದ ಸ್ಥಳೀಯರು