ಹಾವೇರಿ: ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ಇಂದು ಜರುಗಿದ ಕೊಬ್ಬರಿ ಹೋರಿ ಬೆದರಿಸೋ ಸ್ಪರ್ಧೆಯಲ್ಲಿ ಹೋರಿ ಹಿಡಿದಿದ್ದ ವ್ಯಕ್ತಿಯ ಮೇಲೆಯೇ ಹಲ್ಲೆ ಮಾಡಿರುವ ಪ್ರಕರಣ ನಡೆದಿದೆ.
ಅಡಗಂಟಿ ಗ್ರಾಮದ ಶಶಿ ಹಲ್ಲೆಗೊಳಗಾಗಿರುವ ವ್ಯಕ್ತಿ. ಇಂದು ಚಿಕ್ಕಬಾಸೂರು ಗ್ರಾಮದಲ್ಲಿ ಹೋರಿ ಬೆದರಿಸೋ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ವೇಳೆ ಕೊಬ್ಬರಿ ಹೋರಿ ಹಿಡಿದ ವ್ಯಕ್ತಿಯ ಮೇಲೆ ಹುಲಗಿನಕೊಪ್ಪ ಗ್ರಾಮದ ಹೋರಿ ಕಡೆಯವರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇನ್ನು, ಗಾಯಾಳುವನ್ನು ಚಿಕ್ಕಬಾಸೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.