ಹಾವೇರಿ: ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿಯ ಇಜಾರಿಲಕಮಾಪುರದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನ 45 ವರ್ಷದ ಸಿದ್ದಪ್ಪ ಕಣಗಾರ ಎಂದು ಗುರುತಿಸಲಾಗಿದೆ.
ಸಿದ್ದಪ್ಪ ಬೈಕ್ ರಿಪೇರಿ ಗ್ಯಾರೇಜ್ ಇಟ್ಟುಕೊಂಡಿದ್ದ ಎನ್ನಲಾಗಿದೆ. ಚೆಸ್ಸಿ ಕಳ್ಳತನ ಪ್ರಕರಣವೊಂದರಲ್ಲಿ ಪೊಲೀಸರು ನಿನ್ನೆ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದರಂತೆ. ಇದರಿಂದ ಮನನೊಂದು ಸಿದ್ದಪ್ಪ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ಸಿದ್ದಪ್ಪ ತಾನು ಕೆಲಸ ನಿರ್ವಹಿಸುತ್ತಿದ್ದ ಗ್ಯಾರೇಜ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಾವೇರಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿಲ್ಲ. ಇದು ಮೃತನ ಸಂಬಂಧಿಕರಲ್ಲಿ ತೀವ್ರ ಆಕ್ರೋಶ ತರಿಸಿದೆ.