ಹಾವೇರಿ: ಬ್ಯಾಂಕ್ ಮ್ಯಾನೇಜರ್ ಸಾಲ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಬ್ಯಾಂಕ್ಗೆ ಬೆಂಕಿ ಹಚ್ಚಿದ್ದಾನೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೆಡಿಗ್ಗೊಂಡ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ರಟ್ಟಿಹಳ್ಳಿಯ ನಿವಾಸಿ ವಸೀಮ್ (33) ಆರೋಪಿ. ಬೆಳಗಿನ ಜಾವ ಹೆಡಿಗ್ಗೊಂಡ ಗ್ರಾಮದಲ್ಲಿರುವ ಕೆನರಾ ಬ್ಯಾಂಕ್ಗೆ ಬೆಂಕಿ ಹಚ್ಚಿ ಪರಾರಿಯಾಗಲು ಯತ್ನಿಸಿದ್ದ ವೇಳೆ ಈತ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಆರೋಪಿಗೆ ಧರ್ಮದೇಟು ನೀಡಿದ ಗ್ರಾಮಸ್ಥರು, ಪೊಲೀಸರಿಗೆ ಒಪ್ಪಿಸಿದ್ದಾರೆ.
ಬ್ಯಾಂಕ್ನಲ್ಲಿದ್ದ ಕಾಗದ ಪತ್ರಗಳು ಹಾಗೂ ನಗದು ಸುಟ್ಟು ಕರಕಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಸ್ಥಳಕ್ಕೆ ಕಾಗಿನೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ನಂದಿನಿ ತುಪ್ಪ ಕಲಬೆರಕೆ ಪ್ರಕರಣ: ಬೆಂಗಳೂರಿನ ಸಗಟು ಮಾರಾಟ ಏಜೆನ್ಸಿ ವಿರುದ್ಧ ಎಫ್ಐಆರ್