ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಆರಂಭಿಸಲಾದ ಕೋವಿಡ್ ಹೆಲ್ತ್ ಕೇರ್ ಸೆಂಟರ್ಗೆ ಕ್ಷೇತ್ರದ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
ಈ ಕೋವಿಡ್ ಹೆಲ್ತ್ ಕೇರ್ ಸೆಂಟರ್ನಲ್ಲಿ 50 ಬೆಡ್ಗಳ ವ್ಯವಸ್ಥೆ ಮಾಡಲಾಗಿದೆ. ಹೈ ಪ್ರೆಶರ್ ಆಕ್ಸಿಜನ್, ವೆಂಟಿಲೇಟರ್ ಸೌಲಭ್ಯವುಳ್ಳ ಕೋವಿಡ್ ಸೆಂಟರ್ ಇದಾಗಿದೆ. ತಾಲೂಕಿನಲ್ಲಿ ಯಾರಿಗಾದರೂ ಕೊರೊನಾ ಸೋಂಕು ದೃಢಪಟ್ಟರೆ ಜಿಲ್ಲಾಸ್ಪತ್ರೆ ಅಥವಾ ಸವಣೂರಿಗೆ ದಾಖಲಿಸಬೇಕಿತ್ತು. ಹೀಗಾಗಿ ಪಟ್ಟಣದಲ್ಲಿಯೇ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ.
ನಂತರ ಮಾತನಾಡಿದ ಸಚಿವ ಬೊಮ್ಮಾಯಿ, ಉಸಿರಾಟದ ಸಮಸ್ಯೆಯಿಂದ ಬಳಲುವವರಿಗೂ ಸಹ ತಾಲೂಕು ಕೇಂದ್ರದಲ್ಲೇ ಚಿಕಿತ್ಸೆ ಸಿಗುವಂತೆ ಈ ಆಸ್ಪತ್ರೆ ಸಿದ್ಧಗೊಂಡಿದೆ. ತಾಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಇರುವುದರಿಂದ ಒಳಗೆ ಮತ್ತು ಹೊರಗೆ ಹೋಗಲು ಪ್ರತ್ಯೇಕ ಮಾರ್ಗ ಮಾಡಲಾಗಿದೆ. ಅಲ್ಲದೇ ಜಿಲ್ಲಾಸ್ಪತ್ರೆಯಲ್ಲಿ ಸಿಗುವ ಎಲ್ಲ ರೀತಿಯ ಚಿಕಿತ್ಸೆ ತಾಲೂಕು ಕೇಂದ್ರದಲ್ಲಿ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ. ಸದ್ಯ ಮೂರು ವೆಂಟಿಲೇಟರ್ಗಳು ಇಲ್ಲಿ ಲಭ್ಯವಿದ್ದು, ಇನ್ನಷ್ಟು ವೆಂಟಿಲೇಟರ್ ದೊರಕಿಸಿ ಕೊಡಲಾಗುವುದು. ತಾಲೂಕಿನ ಬಂಕಾಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಸಿಗುವಂತೆ ಅಲ್ಲಿಯೂ ಕೋವಿಡ್ ಹೆಲ್ತ್ ಕೇರ್ ಸೆಂಟರ್ ಆರಂಭ ಮಾಡಲಾಗುವುದು ಎಂದರು.
ಈ ಸಂದರ್ಭ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿಲ್ಲಾ ಪಂಚಾಯತ್ ಸಿಇಓ ರಮೇಶ ದೇಸಾಯಿ, ಎಸಿ ಅನ್ನಪೂರ್ಣ ಮುದಕಮ್ಮನವರ ಹಾಗೂ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ಹಾಜರಿದ್ದರು.