ಹಾವೇರಿ: ಕೆ.ಜೆ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಗಲಭೆ ಪೂರ್ವನಿಯೋಜಿತ ಕೃತ್ಯ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಹಾವೇರಿ ಜಿಲ್ಲೆಯ ಹಿರೇಕೆರೂರಿನಲ್ಲಿರುವ ಸ್ವಗೃಹದಲ್ಲಿ ಮಾತನಾಡಿದ ಅವರು, ಉದ್ದೇಶಪೂರ್ವಕವಾಗಿ ಈ ಕೃತ್ಯ ನಡೆದಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಪ್ರತಿಷ್ಠೆಗೆ ಮಸಿ ಬಳಿಯಲು ಈ ಕೃತ್ಯ ಎಸಗಲಾಗಿದೆ ಎಂದು ತಿಳಿಸಿದರು.
ಈ ಕೃತ್ಯಕ್ಕೆ ರಾಜಕೀಯ ಪಕ್ಷದ ಹಿನ್ನೆಲೆ ಇದೆ. ಕಾಂಗ್ರೆಸ್ ಪಕ್ಷಕ್ಕೆ ಒಬ್ಬ ದಲಿತ ಎಂಎಲ್ಎಗೆ ರಕ್ಷಣೆ ಕೊಡಲಾ ಗುತ್ತಿಲ್ಲ. ಕಾಂಗ್ರೆಸ್ ಪಕ್ಷ ಹೇಳುವಂತೆ ಬೆಂಕಿ ಹಚ್ಚಿದವರು ಅಮಾಯಕರಲ್ಲ, ಅವರು ದುಷ್ಕರ್ಮಿಗಳು, ಭಯೋತ್ವಾದಕರು, ದೇಶದ್ರೋಹಿಗಳು. ಅವರಿಗೆ ಸರ್ಕಾರ ತಕ್ಕ ಶಾಸ್ತಿ ಮಾಡುತ್ತೆ ಎಂದರು.