ರಾಣೆಬೆನ್ನೂರು: ಅಪ್ರಾಪ್ತ ಬಾಲಕಿ ಮೇಲೆ ಇಪ್ಪತ್ತಾರು ವರ್ಷದ ಯುವಕ ಅತ್ಯಾಚಾರವೆಸಗಿದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಳೆಹೂಲಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಾಲತೇಶ ಕುಮ್ಮೂರು(26) ಅತ್ಯಾಚಾರ ಎಸಗಿದ ಆರೋಪಿ. ಈತ ಹತ್ತು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ್ದಾನೆ. ಇದರಿಂದ ತೀವ್ರ ಆಘಾತಕ್ಕೆ ಒಳಗಾಗಿದ್ದ ಬಾಲಕಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.