ರಾಣೆಬೆನ್ನೂರ: ಕೊರೊನಾ ವೈರಸ್ ಹೆಚ್ಚಾಗುತ್ತಿದ್ದು, ಅದನ್ನು ನಿಯಂತ್ರಿಸುವ ಸಲುವಾಗಿ ನಗರವನ್ನು ಲಾಕ್ಡೌನ್ ಮಾಡುವಂತೆ ವ್ಯಾಪರಸ್ಥರಿಗೆ ಮತ್ತು ಸಾರ್ವಜನಿಕರಿಗೆ ಶಾಸಕ ಅರುಣಕುಮಾರ ಪೂಜಾರ ಮನವಿ ಮಾಡಿದ್ದಾರೆ.
ನಗರದಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯಾದ್ಯಂತ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ನಿಯಂತ್ರಿಸುವುದು ಕಷ್ಟವಾಗಿದೆ. ಕಾರಣ ವೈರಸ್ ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಲಾಕ್ಡೌನ್ ಮಾಡುವಂತೆ ಮನವಿ ಮಾಡಿದ್ದಾರೆ.
ಸಾರ್ವಜನಿಕರ ಆರೋಗ್ಯ ಗಮನದಲ್ಲಿಟ್ಟುಕೊಂಡು ಜುಲೈ 14ರಿಂದ ಜುಲೈ 20ರವರೆಗೆ ಹಾಲು ಮತ್ತು ಔಷಧಿ ಹೊರತುಪಡಿಸಿ ಎಲ್ಲಾ ಸೇವೆಗಳನ್ನು ಸಂಪೂರ್ಣ ಬಂದ್ ಮಾಡುವಂತೆ ಮನವಿ ಮಾಡಿದ್ದಾರೆ.