ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ವಕೀಲರ ಸಂಘದ ಕಟ್ಟಡದ ಉದ್ಘಾಟನೆ ನೆರವೇರಿಸಿದರು. ಈ ಕಾರ್ಯಕ್ರಮಕ್ಕೆ ಹಾವೇರಿ ಶಾಸಕ ನೆಹರು ಓಲೇಕಾರ್ ಹೆಸರು ಕೈಬಿಟ್ಟಿದ್ದರಿಂದ ಓಲೇಕಾರ್ ಅಭಿಮಾನಿಗಳು ಸಿಎಂ ಬೊಮ್ಮಾಯಿಗೆ ಕಪ್ಪುಬಟ್ಟೆ ತೋರಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು.
ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲು ಮುಂದಾದ ಓಲೇಕಾರ್ ಅಭಿಮಾನಿಗಳನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಮತ್ತು ಹಾವೇರಿ ಶಾಸಕರಾಗಿರುವ ನೆಹರು ಓಲೇಕಾರ್ ಹೆಸರು ಕೈಬಿಟ್ಟಿದ್ದಕ್ಕೆ ಓಲೇಕಾರ್ ಶನಿವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ, ಸಿಎಂ ಮತ್ತು ಸರ್ಕಾರದ ವಿರುದ್ಧ ಭಾನುವಾರ ಕಪ್ಪುಬಟ್ಟೆ ಪ್ರದರ್ಶಿಸಲು ಮುಂದಾಗಿದ್ದರು.
ಆದರೆ ಭಾನುವಾರ ಪ್ರೋಟೋಕಾಲ್ ಪ್ರಕಾರ, ಶಾಸಕರಿಗೆ ಅವಕಾಶವಿಲ್ಲ ಎಂಬುದು ತಿಳಿಯುತ್ತಿದ್ದಂತೆ ಅಭಿಮಾನಿಗಳು ಹೊಸಮನಿ ಸಿದ್ದಪ್ಪ ವೃತ್ತದ ಬಳಿ ಪ್ರತಿಭಟನೆಗೆ ಮುಂದಾಗಿದ್ದರು. ಐವತ್ತಕ್ಕೂ ಅಧಿಕ ಅಭಿಮಾನಿಗಳನ್ನು ವಶಕ್ಕೆ ಪಡೆದ ಸಿಬ್ಬಂದಿ ನಂತರ ಬಿಡುಗಡೆ ಮಾಡಿದರು.
ಓದಿ: ಸಿದ್ದರಾಮಯ್ಯ ಸುಳ್ಳು ಹೇಳುವುದನ್ನ ತಮ್ಮ ಪ್ರವೃತ್ತಿ ಮಾಡಿಕೊಂಡಿದ್ದಾರೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್