ಹಾವೇರಿ: ಶಾಸಕ ಸ್ಥಾನದಿಂದ ಕೆಪಿಜೆಪಿ ಪಕ್ಷದ ಆರ್.ಶಂಕರ್ ಅನರ್ಹಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು.
ರಾಣೆಬೆನ್ನೂರಿನ ಪಕ್ಷೇತರ ಶಾಸಕ ಆರ್. ಶಂಕರ್ ಅವರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸಿ ಸ್ಪೀಕರ್ ಕೆ. ಆರ್ ರಮೇಶ್ ಕುಮಾರ್ ಮಹತ್ವದ ಆದೇಶ ಹೊರಡಿಸಿದ್ದು, ಈ ಹಿನ್ನೆಲೆಯಲ್ಲಿ ನಗರದ ಕುರುಬಗೇರಿ, ಕೋರ್ಟ್ ವೃತ್ತ ಸೇರಿದಂತೆ ಕೆಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆರ್.ಶಂಕರ್ ಕೆಪಿಜೆಪಿ ಪಕ್ಷದ ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದಿಂದ ಆಯ್ಕೆ ಆಗಿದ್ದರು. ನಂತರ ನಡೆದ ರಾಜಕೀಯ ಬೆಳವಣಿಗೆಗಳಲ್ಲಿ ಕಾಂಗ್ರೆಸ್, ಬಿಜೆಪಿ ಎಂದು ಕ್ಷೇತ್ರವನ್ನ ಮರೆತು ಓಡಾಡಿದ್ರು. ಹೀಗಾಗಿ ಶಾಸಕ ಸ್ಥಾನದಿಂದ ಶಂಕರ್ ಅನರ್ಹಗೊಂಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ರು.