ETV Bharat / state

ಆರತಕ್ಷತೆ ಕಾರ್ಯಕ್ರಮದಲ್ಲಿ ಊಟ ಸೇವಿಸಿದ 50ಕ್ಕೂ ಹೆಚ್ಚು ಜನ ಅಸ್ವಸ್ಥ - ಈಟಿವಿ ಭಾರತ ಕನ್ನಡ

ಮದುವೆ ಮನೆಯಲ್ಲಿ ಊಟ ಸೇವಿಸಿದ ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

ಮದುವೆ ಊಟ ಸೇವಿಸಿದ ಜನ ಅಸ್ವಸ್ಥ
ಮದುವೆ ಊಟ ಸೇವಿಸಿದ ಜನ ಅಸ್ವಸ್ಥ
author img

By

Published : May 24, 2023, 1:27 PM IST

ಹಾವೇರಿ: ಆರಕ್ಷತೆಯ ಕಾರ್ಯಕ್ರಮದಲ್ಲಿ ಊಟ ಮಾಡಿದ 50ಕ್ಕೂ ಅಧಿಕ ಜನರು ಅಸ್ವಸ್ಥಗೊಂಡ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಚಪ್ಪರದಹಳ್ಳಿಯಲ್ಲಿ ನಡೆದಿದೆ. ಮದುವೆ ಮುಗಿಸಿಕೊಂಡು ಬಂದು, ಮನೆಯಲ್ಲಿನ ಆರಕ್ಷತೆಯ ಕಾರ್ಯಕ್ರಮದಲ್ಲಿ ಊಟ ಮಾಡಿದ ನಂತರ ಅಸ್ವಸ್ಥತೆ ಕಾಣಿಸಿಕೊಂಡಿದೆ. ಐದು ಜನರು ತೀವ್ರ ಅಸ್ವಸ್ಥಗೊಂಡಿದ್ದು, 40 ಕ್ಕೂ ಅಧಿಕ ಜನರಿಗೆ ರಟ್ಟಿಹಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ‌ನೀಡಲಾಗುತ್ತಿದೆ.

ಶಂಕ್ರಪ್ಪ ಹಿತ್ತಲಮನಿ ಎಂಬುವರ ಮಗಳ ಆರಕ್ಷತೆಯ ಕಾರ್ಯಕ್ರಮದಲ್ಲಿ ಊಟ ಸೇವಿಸಿದವರಲ್ಲಿ ಅಸ್ವಸ್ಥತೆ ಕಾಣಿಸಿಕೊಂಡಿದೆ. ಸೋಮವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಊಟ ಮಾಡಿದ ಜನರಿಗೆ, ಮಂಗಳವಾರ ರಾತ್ರಿಯಿಂದ ವಾಂತಿ ಭೇದಿ ಕಾಣಿಸಿಕೊಂಡಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ವಾಸನ ಗ್ರಾಮದಲ್ಲಿ ಮದುವೆ ಮುಗಿಸಿಕೊಂಡು ಬಂದಿದ್ದು ಚಪ್ಪರದಹಳ್ಳಿ ಆರಕ್ಷತೆಯ ಕಾರ್ಯಕ್ರಮದಲ್ಲಿ ಊಟದ ಸೇವಿಸಿದ ನಂತರ ಜನರು ಅಸ್ವಸ್ಥಗೊಂಡಿದ್ದಾರೆ.

ರಟ್ಟಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಕಲುಷಿತ ಆಹಾರ ಸೇವನೆಯಿಂದ ಜನರು ಅಸ್ವಸ್ಥರಾಗಿದ್ದಾರೆ ಎಂದು ಶಂಕಿಸಲಾಗಿದೆ. ತಾಲೂಕಾಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಆಹಾರವನ್ನ ಪರೀಕ್ಷೆಗೆ ಕಳಿಸಿದ್ದಾರೆ. ರಟ್ಟಿಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಘಟನೆ: ಧಾರವಾಡದ ಜಿಲ್ಲೆಯ ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದರಲ್ಲಿ ಬಿಸಿಯೂಟ ಸೇವಿಸಿ 36 ಮಕ್ಕಳು ಅಸ್ವಸ್ಥಗೊಂಡಿದ್ದರು. ಮಧ್ಯಾಹ್ನ ಬಿಸಿಯೂಟದ ಅನ್ನದಲ್ಲಿ ಹಲ್ಲಿಯಂತ ಹುಳು ಕಂಡು ಬಂದಿತ್ತು. ಬಳಿಕ ಊಟ ಸೇವಿಸಿದ ಸುಮಾರು 36 ಮಕ್ಕಳು ವಾಂತಿ, ವಾಕರಿಕೆ ಮಾಡಿಕೊಂಡ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಳ್ಳಾರಿಯಲ್ಲಿ ನಡೆದ ಘಟನೆಯಲ್ಲಿ ಕಲುಷಿತ ನೀರು ಸೇವಿಸಿ 18 ಜನರು ಅಸ್ವಸ್ಥಗೊಂಡಿದ್ದರು. ಬಳ್ಳಾರಿ ತಾಲೂಕಿನ ಕುಂಟನಾಳ ಗ್ರಾಮದಲ್ಲಿ ಘಟನೆ ನಡೆದಿತ್ತು. ನೀರು ಸೇವಿಸಿದ ನಂತರ ಜನರು ವಾಂತಿ ಮತ್ತು ಭೇದಿಯಿಂದ ಅಸ್ವಸ್ಥರಾಗಿದ್ದರು. ಗ್ರಾಮದ ವಾಲ್ಮೀಕಿ ಭವನದಲ್ಲಿ ತಾತ್ಕಾಲಿಕ ಆರೋಗ್ಯ ಶಿಬಿರ ಪ್ರಾರಂಭಿಸಿ ಅಸ್ವಸ್ಥರಿಗೆ ಚಿಕಿತ್ಸೆ ನೀಡಲಾಗಿತ್ತು. ತೀವ್ರ ಅಸ್ವಸ್ಥಗೊಂಡವರನ್ನು ಬಳ್ಳಾರಿಯ ವಿಮ್ಸ್‌ಗೆ ದಾಖಲಿಸಲಾಗಿತ್ತು.

ಕೆಲ ದಿನಗಳ ಹಿಂದೆ ಯಾದಗಿರಿ ಜಿಲ್ಲೆಯ ಗುರುಮಠಕಲ್‌ ತಾಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆಯರಿಬ್ಬರು ಮೃತಪಟ್ಟಿದ್ದರು. 23ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದರು. ಗ್ರಾಮಕ್ಕೆ ನೀರು ಪೂರೈಸುವ ಪೈಪ್​ನಲ್ಲಿ ಚರಂಡಿ ನೀರು ಸೇರ್ಪಡೆಯಾದ ಪರಿಣಾಮ ಘಟನೆ ಸಂಭವಿಸಿತ್ತು.

ಇದನ್ನೂ ಓದಿ: ಕಲುಷಿತ ನೀರು ಸೇವನೆ: ಇಬ್ಬರು ಮೃತ, 34ಕ್ಕೂ ಹೆಚ್ಚು ಜನರು ಅಸ್ವಸ್ಥ

ಶಿವಮೊಗ್ಗ ಜಿಲ್ಲೆಯ ಗೊಂದಿ ಚಟ್ನಹಳ್ಳಿಯಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇತ್ತೀಚೆಗೆ ಮಧ್ಯಾಹ್ನದ ಊಟ ಸೇವಿಸಿ 60ಕ್ಕೂ ಹಚ್ಚು ಮಕ್ಕಳು ಅಸ್ವಸ್ಥರಾಗಿದ್ದರು. ಸುಮಾರು 300 ಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ವಸತಿ ಶಾಲೆಯಲ್ಲಿ ಮಧ್ಯಾಹ್ನದ ಊಟದ ನಂತರ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿತ್ತು. ಕೆಲವರಲ್ಲಿ ವಾಂತಿ ಸಮಸ್ಯೆ ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ: ಶಿವಮೊಗ್ಗ: ಮಧ್ಯಾಹ್ನದ ಊಟ ಸೇವಿಸಿ 60 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.