ಹಾವೇರಿ: ಬೈಕ್ ಹಾಗೂ ಬೊಲೆರೋ ಗೂಡ್ಸ್ ವಾಹನ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ತಾಯಿ ಮಗ ಸ್ಥಳದಲ್ಲಿ ಸಾವಿಗೀಡಾದ ಘಟನೆ ಜಿಲ್ಲೆಯಲ್ಲಿ ಜರುಗಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ವರ್ದಿ ಕ್ರಾಸ್‌ನಲ್ಲಿ ಈ ಅಪಘಾತ ನಡೆದಿದೆ. ಮೃತ ತಾಯಿ ಮಗನನ್ನ ಮಲವ್ವ ದೇವಗಿರಿ (60) ಮತ್ತು ರುದ್ರಪ್ಪ ದೇವಗಿರಿ (35) ಎಂದು ಗುರುತಿಸಲಾಗಿದೆ.
ಮೃತರು ಹರವಿ ಗ್ರಾಮದ ನಿವಾಸಿಗಳು. ಹಾವೇರಿಯಿಂದ ಹರವಿ ಗ್ರಾಮಕ್ಕೆ ತಾಯಿ ಮಗ ಹೊರಟಿದ್ದರು. ಈ ಸಂದರ್ಭದಲ್ಲಿ ಹಾನಗಲ್ ಕಡೆಯಿಂದ ಬರುತ್ತಿದ್ದ ಬೊಲೆರೋ ಗೂಡ್ಸ್ ವಾಹನ ಡಿಕ್ಕಿಯಾಗಿದ್ದರಿಂದ ಈ ದುರ್ಘಟನೆ ನಡೆದಿದೆ. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Praveen murder case: ಅಂತಿಮ ದರ್ಶನಕ್ಕೆ ಬಂದಿದ್ದ ಕಟೀಲ್ ವಿರುದ್ಧ ಹಿಂದೂ ಕಾರ್ಯಕರ್ತರ ಆಕ್ರೋಶ: ಕಲ್ಲು ತೂರಾಟ, ಲಾಠಿಚಾರ್ಜ್