ಹಾನಗಲ್: ರಸ್ತೆ ಸಮಸ್ಯೆ ಹೇಳಿದ ಗ್ರಾಮಸ್ಥನ ಮೇಲೆ ಹಾವೇರಿ ಸಂಸದ ದರ್ಪ ತೋರಿದ ಆರೋಪ ಹಾನಗಲ್ ತಾಲೂಕಿನ ಸೋಮಸಾಗರ ಗ್ರಾಮದಲ್ಲಿ ಕೇಳಿ ಬಂದಿದೆ.
ಎಡಗೈಯಿಂದ ಗ್ರಾಮಸ್ಥನನ್ನ ನೂಕಿ ಸಂಸದ ಶಿವಕುಮಾರ ಉದಾಸಿ ದರ್ಪ ತೋರಿದ್ದಾರೆ ಎಂದು ಆರೋಪಿಸಲಾಗಿದೆ. ನವೆಂಬರ್ 20, 2020 ರಂದು ನಡೆದಿದೆ ಎನ್ನಲಾದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.