ಹಾವೇರಿ: ಕತ್ತು ಸೀಳಿ ಅಪರಿಚಿತ ವ್ಯಕ್ತಿಯನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರು ಸಮೀಪದ ಮದಗಮಾಸೂರು ಕೆರೆ ಬಳಿ ನಡೆದಿದೆ. ಅಂದಾಜು 45 ವರ್ಷದ ವ್ಯಕ್ತಿಯ ಮೇಲೆ ಮನಬಂದಂತೆ ಹಲ್ಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹವನ್ನು ಕೆರೆಯ ಕಂದಕಕ್ಕೆ ಎಸೆದು ಹೋಗಿದ್ದಾರೆ.
ಮೃತ ವ್ಯಕ್ತಿಯ ವಿಳಾಸ ಮತ್ತು ಹೆಸರು ಪತ್ತೆಗೆ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಟಿ.ವಿ.ಸುರೇಶ, ಹಿರೇಕೆರೂರು ಪೊಲೀಸ್ ಠಾಣೆಯ ಪಿಎಸ್ಐ ವಸಂತ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರೇಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪ್ರವಾಸಿಗರಿಂದ ಕಂಗೊಳಿಸುತ್ತಿದ್ದ ಮದಗಮಾಸೂರು ಜಲಪಾತದ ಮೇಲ್ಬಾಗದಲ್ಲಿಯೇ ಕೊಲೆ ಮಾಡಲಾಗಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ.
ಇದನ್ನೂ ಓದಿ: ವಿಜಯಪುರ: ಆಟೋಗೆ ಬಸ್ ಡಿಕ್ಕಿ, ವಿದ್ಯಾರ್ಥಿಗಳಿಗೆ ಗಾಯ