ಹಾವೇರಿ : ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ನಗರದ ಕಾಗಿನೆಲೆ ಕ್ರಾಸ್ ಬಳಿ ಇರುವ ಮುರಾಘಾಮಠದ ಆವರಣದಲ್ಲಿ ಬಸವ ತತ್ವ, ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಧ್ವಜಾರೋಹಣವನ್ನು ಸವಣೂರು ಕಲ್ಮಠದ ಮಹಾಂತ ಸ್ವಾಮಿಗಳು ನೆರವೇರಿಸಿದರು. ಚಿತ್ರದುರ್ಗ ಬ್ರಹನ್ಮಠದ ಶಿವಮೂರ್ತಿ ಮುರುಘಾ ಶರಣರು ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಮುರುಘಾ ಶರಣರು, ಪ್ರಸ್ತುತ ದಿನಗಳಲ್ಲಿ ಬಸವಣ್ಣನವರ ತತ್ವಗಳು ಹೆಚ್ಚು ಪ್ರಚಾರವಾಗುವ ಅವಶ್ಯಕತೆ ಇದೆ. ಶರಣರ ವಚನಗಳ ಮಾರ್ಗದರ್ಶನದಲ್ಲಿ ನಡೆದರೆ ಬದುಕು ಪಾವನವಾಗುತ್ತದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಹಾವೇರಿ ಬಣ್ಣದ ಮಠದ ಅಭಿನವ ಚೆನ್ನಮಲ್ಲಿಕಾರ್ಜುನ ಶ್ರೀ, ಹೊಸಮಠದ ಬಸವಶಾಂತಲಿಂಗ ಶ್ರೀ ಸೇರಿದಂತೆ ಹಲವು ಮಠಾಧೀಶರು ಉಪಸ್ಥಿತರಿದ್ದರು.