ಹಾವೇರಿ: ನರಗುಂದ ಮತ್ತು ನವಲಗುಂದ ರೈತ ಹುತಾತ್ಮ ದಿನಕ್ಕೆ ಇದೇ 21 ರಂದು 39 ವರ್ಷಗಳಾಗಲಿವೆ. ಈ ಹಿನ್ನೆಲೆಯಲ್ಲಿ ಧಾರವಾಡ ಕಲಾಭವನದಲ್ಲಿ 21 ರಂದು ರೈತ ಹುತಾತ್ಮ ದಿನಾಚರಣೆಯನ್ನ ಆಚರಿಸಲಾಗುವುದು ಎಂದು ರೈತ ಮುಖಂಡ ಮಾಲತೇಶ ಪೂಜಾರ್ ತಿಳಿಸಿದರು.
ಹಾವೇರಿಯಲ್ಲಿ ಮಾತನಾಡಿದ ಅವರು, ಜೆಡಿಎಸ್,ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ತಮ್ಮ ಸ್ವಾರ್ಥಕ್ಕಾಗಿ ರಾಜಕೀಯ ದೊಂಬರಾಟವಾಡುತ್ತೀವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಉಭಯ ಸರ್ಕಾರಗಳು ರೈತರಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡುತ್ತಿವೆ ಎಂದು ಆರೋಪಿಸಿದರು.
ನರಗುಂದ ಮತ್ತು ನವಲಗುಂದ ಹುತಾತ್ಮ ದಿನಕ್ಕೆ ಇದೇ 21 ರಂದು 39 ವರ್ಷಗಳಾಗಲಿವೆ. ಈ ಹಿನ್ನೆಲೆಯಲ್ಲಿ ಧಾರವಾಡ ಕಲಾಭವನದಲ್ಲಿ 21 ರಂದು ರೈತ ಹುತಾತ್ಮ ದಿನಾಚರಣೆಯನ್ನ ಆಚರಿಸಲಾಗುವುದು ಎಂದು ತಿಳಿಸಿದರು.