ರಾಣೇಬೆನ್ನೂರು (ಹಾವೇರಿ): ಮುಖ್ಯಮಂತ್ರಿ ಯಡಿಯೂರಪ್ಪನವರು ಮುನಿರತ್ನ ಅವರನ್ನು ಕರೆಸಿ ಸಮಾಧಾನ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎಂದು ನೂತನ ಸಚಿವ ಆರ್.ಶಂಕರ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಅವರು ಕೊಟ್ಟ ಮಾತಿಗೆ ತಪ್ಪುವ ವ್ಯಕ್ತಿಯಲ್ಲ. ಮುನಿರತ್ನ ಅವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ. ಯಡಿಯೂರಪ್ಪನವರು ಅವರನ್ನು ಕರೆಸಿ ಸಮಾಧಾನ ಮಾಡಿದ್ದು, ಮುಂದಿನ ದಿನಗಳಲ್ಲಿ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎಂದರು.
ಓದಿ: ಸಿಡಿ ಇದ್ರೆ ಬಿಡುಗಡೆ ಮಾಡಲಿ.. ಯೋಗೇಶ್ವರಗೆ ಸಾಲ ನೀಡಿಲ್ಲ; ಸಚಿವ ಎಂಟಿಬಿ ನಾಗರಾಜ್
ಇನ್ನು, ಬಿಜೆಪಿ ಪಕ್ಷದಲ್ಲಿ ಮೂಲ ಮತ್ತು ವಲಸಿಗರು ಎಂಬ ಮಾತಿಲ್ಲ. ನಾವೆಲ್ಲಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇವೆ. ಈ ಬಗ್ಗೆ ನಾನು ಹೇಳಿಕೆ ನೀಡುವುದಿಲ್ಲ ಎಂದರು.