ಹಾವೇರಿ : ಶಾಲೆಗಳು ಆರಂಭವಾದ ನಂತರ ಆಶಾದಾಯಕ ಬೆಳವಣಿಗೆ ಎಂಬಂತೆ ಶಿಕ್ಷಕರು ಮತ್ತು ಸಿಬ್ಬಂದಿ ಸೇರಿ ಜಿಲ್ಲೆಯಲ್ಲಿ ಯಾರಿಗೂ ಕೂಡ ಕೊರೊನಾ ಪಾಸಿಟಿವ್ ಆಗಿಲ್ಲ ಎಂದು ಹಾವೇರಿ ಡಿಡಿಪಿಐ ಅಂದಾನಪ್ಪ ವಡಗೇರಿ ಮಾಹಿತಿ ನೀಡಿದರು.
ಹೊಸ ವರ್ಷದ ದಿನದಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳನ್ನು ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ ತೆರೆಯಲಾಯಿತು. ಜಿಲ್ಲೆಯಲ್ಲಿ ಶಿಕ್ಷಕರು ಮತ್ತು ಸಿಬ್ಬಂದಿ ಸೇರಿ 2,665 ಮಂದಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ಅವರೆಲ್ಲರ ವರದಿ ನೆಗೆಟಿವ್ ಬಂದಿವೆ.
ಈ ಸುದ್ದಿಯನ್ನೂ ಓದಿ: ಪ್ರೀತಿಸಿ ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣು
ಇನ್ನು, ಶಾಲೆಗಳು ಆರಂಭಕ್ಕೂ ಮೂರು ದಿನ ಮೊದಲು ಶಿಗ್ಗಾಂವಿ ತಾಲೂಕಿನ ಓರ್ವ ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಶಿಕ್ಷಕ ಹಾಗೂ ಅವರ ಕುಟುಂಬದವರನ್ನು ಕ್ವಾರಂಟೈನ್ ಮಾಡಲಾಗಿಸದೆ.