ETV Bharat / state

ಸಾರಿಗೆ ನೌಕರರ ಮುಷ್ಕರ: ಸಚಿವ ಸವದಿ ತವರೂರಲ್ಲಿ ತಟ್ಟದ ಪ್ರತಿಭಟನೆಯ ಬಿಸಿ

ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಎಂದು ಆಗ್ರಹಿಸಿ ಸಾರಿಗೆ ಇಲಾಖೆ ಸಿಬ್ಬಂದಿ ಕರೆ ನೀಡಿರುವ ಬಂದ್​ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಒಂದೆಡೆ ಹೋರಾಟ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದರೆ, ಮತ್ತೊಂದೆಡೆ ಎಂದಿನಂತೆ ಬಸ್​ಗಳು ರೋಡಿಗಿಳಿದಿವೆ.

No protest in belguam
ಸಾರಿಗೆ ನೌಕರರ ಮುಷ್ಕರದ ಬಿಸಿ
author img

By

Published : Dec 11, 2020, 7:55 AM IST

Updated : Dec 11, 2020, 10:47 AM IST

ಬೆಳಗಾವಿ/ಹಾವೇರಿ: ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡಬೇಕೆಂದು ಆಗ್ರಹಿಸಿ ಸಾರಿಗೆ ನೌಕರರು ಕರೆ ನೀಡಿರುವ ಮುಷ್ಕರಕ್ಕೆ ಬೆಳಗಾವಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಹಾವೇರಿ, ಬೆಳಗಾವಿ ಜಿಲ್ಲೆಯಲ್ಲಿ ತಟ್ಟದ ಸಾರಿಗೆ ನೌಕರರ ಮುಷ್ಕರದ ಬಿಸಿ

ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ನೌಕರರು ಇಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಆದ್ರೆ, ಸಾರಿಗೆ ಸಚಿವ ಲಕ್ಷ್ಮಣ್​ ಸವದಿ ಅವರ ತವರು ಜಿಲ್ಲೆಯಲ್ಲಿ ಮಷ್ಕರದ ಬಿಸಿ ತಟ್ಟಿಲ್ಲ. ಎಂದಿನಂತೆ ಬಸ್​ಗಳು ಕಾರ್ಯಾಚರಣೆಗೆ ಇಳಿದಿವೆ.

ಹಾವೇರಿ ಜಿಲ್ಲೆಯಲ್ಲೂ ಸಹ ಎಂದಿನಂತೆ ಸಾರಿಗೆ ಬಸ್​ಗಳು ಸಂಚರಿಸುತ್ತಿವೆ. ಹಾವೇರಿ ಡಿಪೋದಿಂದ ಬಸ್​ಗಳು ವಿವಿಧೆಡೆ ಸಂಚಾರ ಆರಂಭಿಸಿವೆ. ಹಾವೇರಿಯಿಂದ ಹುಬ್ಬಳ್ಳಿ, ಗದಗ ಸೇರಿದಂತೆ ಗ್ರಾಮೀಣ ಭಾಗಗಳಿಗೆ ಬಸ್​ಗಳು ತೆರಳುತ್ತಿವೆ.

Last Updated : Dec 11, 2020, 10:47 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.