ETV Bharat / state

ನೆರೆ ಪರಿಹಾರ ಕಾರ್ಯಗಳು ನಿಲ್ಲಬಾರದು: ಬಸವರಾಜ ಬೊಮ್ಮಾಯಿ - flood in haveri

ಹಾವೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ನೆರೆ ಪರಿಹಾರಕ್ಕೆ ಸಂಬಂಧಿಸಿದ ಯಾವುದೇ ಪರಿಹಾರ ಕಾರ್ಯಗಳು ನಿಲ್ಲಬಾರದು, ವಿಳಂಬವಾಗಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ
author img

By

Published : Aug 30, 2019, 10:42 PM IST

ಹಾವೇರಿ: ನೆರೆ ಗ್ರಾಮಗಳ ಶಾಶ್ವತ ಸ್ಥಳಾಂತರ ಹಾಗೂ ತಡೆಗೋಡೆ ನಿರ್ಮಾಣ ಮಾಹಿತಿ ಸಂಗ್ರಹಿಸುವಂತೆ ಹಾವೇರಿ ಅಧಿಕಾರಿಗಳಿಗೆ ಗೃಹಸಚಿವ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

ಹಾವೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ನೆರೆ ಪರಿಹಾರಕ್ಕೆ ಸಂಬಂಧಿಸಿದ ಯಾವುದೇ ಪರಿಹಾರ ಕಾರ್ಯಗಳು ನಿಲ್ಲಬಾರದು, ವಿಳಂಬವಾಗಬಾರದು ಎಂದು ತಿಳಿಸಿದರು. ಸರ್ಕಾರ ಸಂತ್ರಸ್ತರ ಸಮಸ್ಯೆಗೆ ಕೂಡಲೇ ಸ್ಪಂದಿಸಿದೆ. ಅದೇ ವೇಗದಲ್ಲಿ ಜಿಲ್ಲಾಡಳಿತ ಕೆಲಸ ಮಾಡಬೇಕು. ಸಂತ್ರಸ್ತರ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಗೃಹಸಚಿವರಾದ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು.

ಅಧಿಕಾರಿಗಳ ಜೊತೆ ಗೃಹಸಚಿವ ಬಸವರಾಜ ಬೊಮ್ಮಾಯಿ ಸಭೆ

ನೆರೆ ಸಂದರ್ಭದಲ್ಲಿ ಜಿಲ್ಲೆಯ ಅಧಿಕಾರಿಗಳು ಅತ್ಯುತ್ತಮವಾಗಿ ನಿರ್ವಹಣೆ ಮಾಡಿದ್ದಾರೆ. ಎಲ್ಲಾ ಅಧಿಕಾರಿಗಳನ್ನು ಅಭಿನಂದಿಸುವೆ. ಪರಿಹಾರ ಕಾರ್ಯವೂ ಅಷ್ಟೇ ವೇಗವಾಗಿ ತ್ವರಿತವಾಗಿ ನಡೆಯಬೇಕು. ಪುನರ್ವಸತಿ ಕೆಲಸ ನಿರಂತರವಾಗಿ ನಡೆಯಬೇಕು. ಉನ್ನತ ಮಟ್ಟದಲ್ಲಿ ನಡೆಯಬೇಕು. ಎಲ್ಲ ಅಧಿಕಾರಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವಂತೆ ಬೊಮ್ಮಾಯಿ ಸಲಹೆ ನೀಡಿದರು.

sample description
ETV Bharat Logo

Copyright © 2025 Ushodaya Enterprises Pvt. Ltd., All Rights Reserved.