ETV Bharat / state

ಹಾನಗಲ್ ವಿಧಾನಸಭಾ ಉಪಚುನಾವಣೆಗೆ 3 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ - Hangal Assembly by-election

ಅ.30 ರಂದು ನಡೆಯಲಿರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮಂಗಳವಾರ ಮೂರು ಅಭ್ಯರ್ಥಿಗಳು ನಾಲ್ಕು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಮೂರು ಅಭ್ಯರ್ಥಿಗಳು ಚುನಾವಣಾಧಿಕಾರಿ ಅನ್ನಪೂರ್ಣಾ ಮುದಕಮ್ಮನವರಿಗೆ ನಾಮಪತ್ರ ಸಲ್ಲಿಸಿದರು.

Nominations for Hangal Assembly by-election
ಹಾನಗಲ್ ವಿಧಾನಸಭಾ ಉಪಚುನಾವಣೆಗೆ 3 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
author img

By

Published : Oct 5, 2021, 10:42 PM IST

ಹಾವೇರಿ: ಅ.30 ರಂದು ನಡೆಯಲಿರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮಂಗಳವಾರ ಮೂರು ಅಭ್ಯರ್ಥಿಗಳು ನಾಲ್ಕು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಶಿವಕುಮಾರ್ ತಳವಾರ್ ಎಂಬ ಅಭ್ಯರ್ಥಿ ಪಕ್ಷೇತರ ಮತ್ತು ಲೋಕಶಕ್ತಿ ಪಕ್ಷದಿಂದ 2 ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್ ನಿಯಾಜ್ ಶೇಕ್ ನಾಮಪತ್ರ ಸಲ್ಲಿಸಿದ್ದಾರೆ. ಅಶೋಕ್ ಹಣಜಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಮೂರು ಅಭ್ಯರ್ಥಿಗಳು ಚುನಾವಣಾಧಿಕಾರಿ ಅನ್ನಪೂರ್ಣಾ ಮುದಕಮ್ಮನವರಿಗೆ ನಾಮಪತ್ರ ಸಲ್ಲಿಸಿದರು. ಇದರಿಂದಾಗಿ ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಇದುವರೆಗೂ 4 ಅಭ್ಯರ್ಥಿಗಳು ಐದು ನಾಮಪತ್ರ ಸಲ್ಲಿಸಿದಂತಾಗಿದೆ. ನಾಮಪತ್ರ ಸಲ್ಲಿಕೆಗೆ ಅ.08 ಕೊನೆಯ ದಿನವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.