ETV Bharat / state

ಕೊರೊನಾ ಸೋಂಕಿತೆಯನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ - ಹಾವೇರಿ ಲೇಟೆಸ್ಟ್ ನ್ಯೂಸ್

ಹಾವೇರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವೃದ್ಧೆಯನ್ನು ಆಸ್ಪತ್ರೆಗೆ ಶಿಫ್ಟ್ ಮಾಡುವಲ್ಲಿ ಆರೋಗ್ಯಾಧಿಕಾರಿಗಳು ನಿರ್ಲಕ್ಷ್ಯ ತೋರಿರುವ ಆರೋಪ ಕೇಳಿ ಬಂದಿದೆ.

Officers neglected to hospitalization of infected women at Haveri
ಸೋಂಕಿತೆಯನ್ನು ಆಸ್ಪತ್ರೆ ದಾಖಲಿಸುವಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳು
author img

By

Published : Jul 4, 2020, 5:29 PM IST

ಹಾವೇರಿ: ಕೊರೊನಾ ಸೋಂಕಿತ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಲು ಆರೋಗ್ಯಾಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಜಿಲ್ಲೆಯ ಹಾನಗಲ್ ತಾಲೂಕಿನ ಆರೇಗೊಪ್ಪ ಗ್ರಾಮದ 60 ವರ್ಷದ ವೃದ್ಧೆ ಸೋಂಕಿನಿಂದ ನರಳುತ್ತಿದ್ದರು. ಈ ಕುರಿತಂತೆ ಆರೋಗ್ಯ ಇಲಾಖಾ ಅಧಿಕಾರಿಗಳಿಗೆ ಆಸ್ಪತ್ರಗೆ ರವಾನಿಸುವಂತೆ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಸೋಂಕಿತೆಯನ್ನು ಆಸ್ಪತ್ರೆ ದಾಖಲಿಸುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ಆದರೆ ಅಧಿಕಾರಿಗಳು ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲ, ಆಂಬ್ಯುಲೆನ್ಸ್ ಇಲ್ಲ, ಡಿಹೆಚ್ಒ ಕಳುಹಿಸುತ್ತಾರೆ ಎಂದು ಹೇಳಿ ಸಮಯ ಕಳೆದಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ನಿನ್ನೆ ಬೆಳಗ್ಗೆಯಿಂದ ರಾತ್ರಿ ಹನ್ನೊಂದು ಗಂಟೆಯವರೆಗೂ ಸೋಂಕಿತೆ ನರಳಿದ್ದು, ಬಳಿಕ ಆರೋಗ್ಯ ಇಲಾಖಾ ಸಿಬ್ಬಂದಿ ಬಂದು ಆಸ್ಪತ್ರೆಗೆ ದಾಖಲಿಸಿದರು ಎನ್ನಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.