ETV Bharat / state

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿ ವಶಪಡಿಸಿಕೊಂಡ ಅಧಿಕಾರಿಗಳು

ರಾಣೆಬೆನ್ನೂರಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 3 ಕ್ವಿಂಟಲ್ 96 ಕೆಜಿ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Officers seized ration rice
ಪಡಿತರ ಅಕ್ಕಿ ವಶಪಡಿಸಿಕೊಂಡ ಅಧಿಕಾರಿಗಳು
author img

By

Published : Sep 18, 2020, 11:30 PM IST

Updated : Sep 19, 2020, 1:11 PM IST

ರಾಣೆಬೆನ್ನೂರ : ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಆಹಾರ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡ ಘಟನೆ ನಗರದಲ್ಲಿ ನಡೆದಿದೆ.

ಇಲ್ಲಿನ ಬಸವೇಶ್ವರ ದೇವಸ್ಥಾನದ ಪಕ್ಕದಲ್ಲಿನ ಮನೆಯೊಂದರಲ್ಲಿ ಅಕ್ರಮವಾಗಿ ಅಕ್ಕಿ ಕೂಡಿಡಲಾಗಿದೆ ಎಂಬ ಮಾಹಿತಿ ಮೇರೆಗೆ ತಹಶೀಲ್ದಾರ್​​ ಬಸನಗೌಡ ಕೊಟೂರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಮನೆಯಲ್ಲಿ ಸುಮಾರು 9 ಚೀಲಗಳಲ್ಲಿ ಸಂಗ್ರಹಿಸಿಟ್ಟಿದ್ದ 3 ಕ್ವಿಂಟಲ್ 96 ಕೆಜಿ ಅಕ್ಕಿಯನ್ನು ವಶಪಡಿಸಿಕೊಂಡಿದ್ದು, ಆಹಾರ ಇಲಾಖೆಯ ಅಧಿಕಾರಿಗಳು ಆ ಪಡಿತರ ಅಕ್ಕಿಯನ್ನು ಸರ್ಕಾರದ ಗೋದಾಮಿಗೆ ಸಾಗಿಸಿದ್ದಾರೆ. ಅಲ್ಲದೇ ಸಂಗ್ರಹಿಸಿಟ್ಟ ವ್ಯಕ್ತಿಗಳ ಮೇಲೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Last Updated : Sep 19, 2020, 1:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.