ಹಾವೇರಿ : ಜಿಲ್ಲೆಯ ಶಿಗ್ಗಾಂವಿ ಪಟ್ಟಣದ 70 ವರ್ಷದ ವೃದ್ಧೆ ಸೋಂಕಿಗೆ ಬಲಿಯಾಗಿದ್ದಾರೆ.
ಸೋಂಕು ದೃಢಪಡುತ್ತಿದ್ದಂತೆ ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸರ್ಕಾರದ ನಿಯಮಾವಳಿಯಂತೆ ಅಂತ್ಯಕ್ರಿಯೆ ನೆರವೇರಿಸುವಂತೆ ಪುರಸಭೆ ಅಧಿಕಾರಿಗಳಿಗೆ ತಹಶೀಲ್ದಾರ್ ಸೂಚಿಸಿದ್ದಾರೆ.
ಈ ಸಾವಿನಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.