ಹಾನಗಲ್ (ಹಾವೇರಿ): ದುಷ್ಕರ್ಮಿಗಳು ದೊಣ್ಣೆಯಿಂದ ಹೊಡೆದು ಐದು ಮಂಗಗಳನ್ನು ಹತ್ಯೆ ಮಾಡಿರುವ ಘಟನೆ ಹಾನಗಲ್ ತಾಲೂಕಿನ ತಿಳುವಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಲಾಲಖಾನವರ ಎಂಬುವರ ತೋಟದಲ್ಲಿ ಐದು ಮಂಗಗಳು ಸಾವನ್ನಪ್ಪಿವೆ. ದುಷ್ಕರ್ಮಿಗಳು ಬಲೆ ಹಾಕಿ ಮಂಗಗಳನ್ನ ಸೆರೆಹಿಡಿದು, ದೊಣ್ಣೆಯಿಂದ ಹೊಡೆದು ಸಾಯಿಸಿದ್ದಾರೆ. ಬಳಿಕ ಜನರನ್ನ ಕಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.