ಹಾವೇರಿ: ಜಿಲ್ಲೆಯ ವಿವಿಧೆಡೆ ಗುಡುಗು ಸಿಡಿಲು ಸಹಿತ ಸಾಧಾರಣ ಮಳೆಯಾಗಿದ್ದು, ಸಿಡಿಲು ಬಡಿದು ಎತ್ತು ಸಾವಿಗೀಡಾಗಿದೆ.
ಹಾವೇರಿ ತಾಲೂಕಿನ ಅಗಡಿ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಸಾವನ್ನಪ್ಪಿದೆ. ಶಬ್ಬೀರಸಾಬ್ ಚೋಪದಾರ ಎಂಬ ರೈತನಿಗೆ ಸೇರಿದ ಎತ್ತು ಇದಾಗಿದೆ. ಜಮೀನಿನಿಂದ ಮರಳಿ ಮನೆಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.