ಹಾವೇರಿ: ಶಿಗ್ಗಾವಿ ಪುರಸಭೆ ಅಧ್ಯಕ್ಷ ಶ್ರೀಕಾಂತ ಬುಳ್ಳಕ್ಕನವರ ಮತ್ತು ಉಪಾಧ್ಯಕ್ಷ ಮಂಜುನಾಥ ಬ್ಯಾಹಟ್ಟಿ ವಿರುದ್ಧ ಅವಿಶ್ವಾಸ ಮಂಡಿಸಲು ಸದಸ್ಯರು ಪುರಸಭೆ ಮುಖ್ಯಾಧಿಕಾರಿಗೆ ಅರ್ಜಿ ಸಲ್ಲಿಸಿದ್ದಾರೆ.
ಶಿಗ್ಗಾವಿ ಪುರಸಭೆಯ 23 ಸದಸ್ಯರಲ್ಲಿ 17 ಸದಸ್ಯರು ಅವಿಶ್ವಾಸ ಮಂಡನೆಗೆ ಅರ್ಜಿ ಸಲ್ಲಿಸಿದ್ದು, ಒಟ್ಟು 23 ಸದಸ್ಯ ಬಲದ ಪುರಸಭೆಯಲ್ಲಿ
ಬಿಜೆಪಿ 9, ಕಾಂಗ್ರೆಸ್ 6 ಮತ್ತು 8 ಮಂದಿ ಪಕ್ಷೇತರ ಸದಸ್ಯರಿದ್ದಾರೆ.
ಪಕ್ಷೇತರ ಸದಸ್ಯರ ಬೆಂಬಲದಿಂದ ಪುರಸಭೆಯಲ್ಲಿ ಬಿಜೆಪಿ ಅಧಿಕಾರ ನಡೆಸುತ್ತಿದೆ. ಒಪ್ಪಂದದ ಪ್ರಕಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ರಾಜೀನಾಮೆ ನೀಡದ ಹಿನ್ನೆಲೆಯಲ್ಲಿ ಅವಿಶ್ವಾಸ ನಿರ್ಣಯಕ್ಕೆ ಸಭೆ ಕರೆಯುವಂತೆ 17 ಸದಸ್ಯರು ಅರ್ಜಿ ಸಲ್ಲಿಸಿದ್ದಾರೆ.