ಹಾವೇರಿ: ರಾಜ್ಯ ಪ್ರವಾಸ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಯುದ್ಧದಲ್ಲಿ ಮೃತಪಟ್ಟಿದ್ದ ವೈದ್ಯಕೀಯ ವಿದ್ಯಾರ್ಥಿ ನವೀನ್ ಕುಟುಂಬಸ್ಥರನ್ನು ಭೇಟಿ ಮಾಡಲಿದ್ದಾರೆ. ಈ ಬಗ್ಗೆ ಮೃತ ವಿದ್ಯಾರ್ಥಿ ತಂದೆ ಶೇಖರಗೌಡ ಗ್ಯಾನಗೌಡರ ಮಾಹಿತಿ ಹಂಚಿಕೊಂಡಿದ್ದಾರೆ.
ಜೂನ್ 20ರಂದು ಪ್ರಧಾನಿ ಮೋದಿಯವರ ರಾಜ್ಯ ಭೇಟಿ ವೇಳೆ ನವೀನ್ ಕುಟುಂಬಸ್ಥರನ್ನು ಪ್ರಧಾನಿ ಆಹ್ವಾನಿಸಿದ್ದಾರೆ. ಎರಡು ದಿನಗಳ ಹಿಂದೆ ಪ್ರಧಾನಿ ಕಚೇರಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಮಾಹಿತಿ ಲಭ್ಯವಾಗಿದೆ. ಪ್ರಧಾನಿ ಭೇಟಿ ಬಗ್ಗೆ ನವೀನ್ ತಂದೆಗೆ ಸಿಎಂ ಬಸವರಾಜ ಬೊಮ್ಮಾಯಿ ಕರೆ ಮಾಡಿ ತಿಳಿಸಿದ್ದಾರೆ.
ಜೂನ್ 20ರಂದು ಬೆಂಗಳೂರಿನಲ್ಲಿ ನವೀನ್ ಕುಟುಂಬದವರನ್ನು ಪ್ರಧಾನಿ ಮೋದಿ ಭೇಟಿ ಮಾಡಲಿದ್ದಾರೆ. ಈಗಾಗಲೇ ಶೇಖರಗೌಡ ಗ್ಯಾನಗೌಡರ ಕುಟುಂಬಸ್ಥರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಅವರ ಜೊತೆಗೆ ಪತ್ನಿ ವಿಜಯಲಕ್ಷ್ಮೀ ಮತ್ತು ನವೀನ್ ಸಹೋದರ ಹರ್ಷ ಕೂಡ ತೆರಳಿದ್ದಾರೆ.
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ಎಂಬಿಬಿಎಸ್ ವಿದ್ಯಾರ್ಥಿ ನವೀನ್, ಮಾರ್ಚ್ 1ರಂದು ಉಕ್ರೇನ್ನಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದ.
ಇದನ್ನೂ ಓದಿ: ಪ್ರಧಾನಿ ಮೋದಿ ಬೆಂಗಳೂರು ರೋಡ್ ಶೋ ರದ್ದು: ವಾಯು ಮಾರ್ಗದಲ್ಲೇ ಸಂಚಾರ