ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಅಧಿಕವಾಗುತ್ತಿದೆ. ಸರ್ಕಾರ ಈ ಕುರಿತಂತೆ ಸಂಪೂರ್ಣ ಲಾಕ್ಡೌನ್ ಜಾರಿಗೆ ತಂದಿದೆ. ಆದರೂ ಜಿಲ್ಲೆಯಲ್ಲಿ ಜನ ಅನಗತ್ಯ ಓಡಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಇಳಿದಿರುವ ಪೊಲೀಸ್ ಇಲಾಖೆ ವಾಹನ ಸವಾರರ ತಪಾಸಣೆ ನಡೆಸುತ್ತಿದೆ.
ಲಾಕ್ಡೌನ್ ಆರಂಭವಾದಾಗಿನಿಂದ ಹಾವೇರಿ ಜಿಲ್ಲೆಯಲ್ಲಿ ಮಾಸ್ಕ್ ಧರಿಸದೆ ಇರುವ 38,769 ಜನರಿಗೆ ತಲಾ ನೂರು ರೂಪಾಯಿ ದಂಡ ಹಾಕಲಾಗಿದೆ. ಇದರಿಂದ ಸುಮಾರು 38,76,900 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಇನ್ನು ಇದುವರೆಗೊ ಜಿಲ್ಲೆಯಲ್ಲಿ ಮೂರು ಸಾವಿರ ವಾಹನಗಳನ್ನ ಸೀಜ್ ಮಾಡಲಾಗಿದೆ. ರಾಷ್ಟ್ರೀಯ ವಿಪತ್ತು ಕಾಯ್ದೆ ಉಲ್ಲಂಘನೆ ಮಾಡಿರುವ ಸುಮಾರು 209 ಪ್ರಕರಣಗಳನ್ನ ದಾಖಲಿಸಲಾಗಿದೆ.
ಜಿಲ್ಲೆಯಲ್ಲಿ ನಾವೆಷ್ಟು ಕಷ್ಟಪಟ್ಟು ಕೆಲಸ ಮಾಡಿದರೂ ಅಷ್ಟೇ. ಸಾರ್ವಜನಿಕರು ತಮ್ಮ ಜೊತೆ ಕೈ ಜೋಡಿಸಿದರೆ ಆದಷ್ಟು ಬೇಗ ಕೊರೊನಾ ಪೀಡಿತರ ಸಂಖ್ಯೆಯನ್ನ ಕಡಿಮೆ ಮಾಡಬಹುದು ಎನ್ನುವ ಅಭಿಪ್ರಾಯವನ್ನ ಹಾವೇರಿ ಎಸ್ಪಿ ಕೆ.ಜಿ.ದೇವರಾಜ್ ವ್ಯಕ್ತಪಡಿಸಿದ್ದಾರೆ.