ರಾಣೆಬೆನ್ನೂರು(ಹಾವೇರಿ): ದೇಶಾದ್ಯಂತ ಲಾಕ್ಡೌನ್ ಆದೇಶವಿದೆ. ಈ ವೇಳೆ ಜನರು ಅನಗತ್ಯವಾಗಿ ಹೊರಗೆ ಬರಬೇಡಿ, ವಾಹನ ಚಾಲನೆ ಕೂಡಾ ಬೇಡ ಎಂದು ಸಾಕಷ್ಟು ಬಾರಿ ಹೇಳಿದರೂ ಜನರು ಕೇಳುತ್ತಿಲ್ಲ. ಇಂದು ಅನಾವಶ್ಯಕವಾಗಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕುಗಳನ್ನು ರಾಣೆಬೆನ್ನೂರಿನ ಶಹರ ಠಾಣಾ ಪೋಲಿಸರು ವಶಪಡಿಸಿಕೊಂಡಿದ್ದಾರೆ.
ಕೊರೊನಾ ವೈರಸ್ ತಡೆಗಟ್ಟಲು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಮನೆಯಿಂದ ಯಾರೂ ಹೊರಗೆ ಬರಬೇಡಿ ಎಂದು ಮನವಿ ಮಾಡಿದೆ. ಆದರೆ ಕೆಲವರು ಅನಾವಶ್ಯಕವಾಗಿ ಬೈಕ್ ತಗೆದುಕೊಂಡು ನಗರದಲ್ಲಿ ಸಂಚಾರ ಮಾಡುತ್ತಿದ್ದಾರೆ. ಇದನ್ನು ಗಮನಿಸಿದ ಶಹರ ಠಾಣೆಯ ಪಿಎಸ್ಐ ಪ್ರಭು ಕೆಳಗಿಮನಿ ಮತ್ತು ಪ್ರೊಬೆಷನರಿ ಎಸ್ಐ ಮಹೇಶಗೌಡ ಸೇರಿ ಕಳೆದ ಮೂರು ದಿನಗಳಿಂದ ಸುಮಾರು 70 ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ. ಸದ್ಯಕ್ಕೆ ವಶಪಡಿಸಿಕೊಂಡ ಬೈಕುಗಳನ್ನು ಮಕುರಗಲ ಶಹರ ಠಾಣೆಯಲ್ಲಿ ಇರಿಸಲಾಗಿದ್ದು, ಲಾಕ್ ಡೌನ್ ಮುಗಿದ ನಂತರ ಎಲ್ಲಾ ದಾಖಲೆಗಳನ್ನು ತೋರಿಸಿ ತಮ್ಮ ವಾಹನಗಳನ್ನು ತೆಗೆದುಕೊಂಡು ಹೋಗುವಂತೆ ಪೊಲೀಸರು ತಿಳಿಸಿದ್ದಾರೆ.