ಹಾವೇರಿ: ಹುತಾತ್ಮ ರೈತ ದಿನಾಚರಣೆಯಲ್ಲಿಯೂ ಸಹ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂದು ವಿಭಜಿಸಿರುವುದು ನೋವು ತರಿಸಿದೆ ಎಂದು ಉತ್ತರ ಕರ್ನಾಟಕ ರೈತ ಸಂಘದ ಹಾವೇರಿ ಜಿಲ್ಲಾಧ್ಯಕ್ಷ ಈರಣ್ಣ ಹಲಗೇರಿ ಬೇಸರ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲೆಡೆ ಹುತಾತ್ಮ ರೈತ ದಿನಾಚರಣೆ ಆಚರಿಸಲಾಗುತ್ತಿದೆ. ಆದರೆ ಬೆಂಗಳೂರು ಮತ್ತು ರಾಮನಗರದಲ್ಲಿ ಹುತಾತ್ಮ ರೈತ ದಿನಾಚರಣೆ ಆಚರಿಸುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ರು.
ರೈತ ಸಂಘಟನೆಗಳು ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಎಂದು ಭೇದ ಭಾವ ಮಾಡದೆ ಎಲ್ಲರೂ ಒಂದಾಗಿ ಆಚರಿಸುವಂತೆ ಹೇಳಿದರು. ಹುತಾತ್ಮ ರೈತ ದಿನಾಚರಣೆಯನ್ನು ಇದೇ 21ರಂದು ಹಾವೇರಿಯಲ್ಲಿ ಆಚರಿಸಲಾಗುತ್ತಿದ್ದು, ರಾಜ್ಯಾಧ್ಯಕ್ಷರು ಸೇರಿದಂತೆ ರೈತ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.