ಹಾವೇರಿ: ಜಿಲ್ಲಾ ಚುನಾವಣಾಧಿಕಾರಿಗಳು ಜಿಲ್ಲೆಯಲ್ಲಿ ಅತ್ಯಧಿಕ ಮತದಾನ ನಡೆಯಲು ಭರದ ಸಿದ್ಧತೆ ನಡೆಸಿದ್ದಾರೆ.
ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕ ಕಾರ್ಯಕ್ರಮವಿರಲಿ ಅಲ್ಲಿ ವಿವಿಪ್ಯಾಟ್ ಮತ್ತು ಬ್ಯಾಲೇಟ್ ಯುನಿಟ್ ತಗೆದುಕೊಂಡು ಹೋಗಿ ಮತದಾನ ಮಾಡುವ ಕುರಿತಂತೆ ಪ್ರಾತ್ಯಕ್ಷಿಕೆ ನೀಡುತ್ತಿದ್ದಾರೆ. ಶನಿವಾರ ಹಾವೇರಿ ಸಮೀಪದ ಕಳ್ಳಿಹಾಳದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅಧಿಕಾರಿಗಳು, ಮತದಾನ ಕುರಿತಂತೆ ಪ್ರಾತ್ಯಕ್ಷಿಕೆ ನೀಡಿದರು.
ವಧು-ವರರಿಗೆ ತಪ್ಪದೇ ಮತದಾನ ಮಾಡುವಂತೆ ಮನವಿ ಮಾಡಿದರು. ಜೊತೆಗೆ ಮದುವೆಯಲ್ಲಿ ಪಾಲ್ಗೊಂಡಿದ್ದ ಸಾವಿರಾರು ಜನರಿಗೆ ಮತದಾನ ಕುರಿತಂತೆ ತಿಳುವಳಿಕೆ ನೀಡಿದರು.