ಹಾವೇರಿ : ಪ್ರಣವಾನಂದ ಸ್ವಾಮೀಜಿ ತಮ್ಮ ಪಂಚಾಯತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಜಿಲ್ಲಾಡಳಿತ ಕಚೇರಿಗೆ ಬಂದ ಪ್ರಣವಾನಂದ ಸ್ವಾಮೀಜಿ ಹಾವೇರಿ ಜಿಲ್ಲಾ ಪಂಚಾಯತ್ ಸಿಇಒ ಮಹ್ಮದ್ ರೋಷನ್‌ಗೆ ರಾಜೀನಾಮೆ ಪತ್ರ ಸಲ್ಲಿಸಿದರು.
ರಾಜೀನಾಮೆ ಪತ್ರ ಸಲ್ಲಿಸುವ ಮುನ್ನ ಮಾತನಾಡಿದ ಅವರು, ರಾಜ್ಯದ ಗ್ರಾಮೀಣಾಭಿವೃದ್ಧಿ ಇಲಾಖೆ ಒಂದು ಸತ್ತ ಇಲಾಖೆ ಎಂದು ಆರೋಪಿಸಿದರು. ಬಡವರಿಗೆ, ನೊಂದವರಿಗೆ ವಿಕಲಚೇತನರಿಗೆ ಎಲ್ಲಿಯೂ ಸಹ ಸರ್ಕಾರದ ಯೋಜನೆಗಳು ತಲುಪುತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆ ಹಾಳಾಗುತ್ತಿರುವುದಕ್ಕೆ ನೊಂದು ದುಃಖದಿಂದ ತಮ್ಮ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ.
ಸಿಎಂ ತವರು ಜಿಲ್ಲೆ ಹಾವೇರಿಯಲ್ಲಿ ಒಬ್ಬ ವಿದ್ಯಾವಂತನಿಗೆ, ಸಮಾಜದ ಗುರುವಿಗೆ ಕಾರ್ಯನಿರ್ವಹಿಸವಲು ಸಾಧ್ಯವಾಗುತ್ತಿಲ್ಲ ಎಂದು ಹತಾಶೆ ವ್ಯಕ್ತಪಡಿಸಿದರು. ಸ್ವಜನಪಕ್ಷಪಾತ, ಭ್ರಷ್ಟಾಚಾರ, ಹಗರಣಗಳು ನಡೆಯುತ್ತಿವೆ. ಅಧಿಕಾರಿಗಳಿಗೆ ಎಲ್ಲಾ ಗೊತ್ತಿದ್ದರು ಸುಮ್ಮನೆ ಇದ್ದಾರೆ ಎಂದು ಸ್ವಾಮೀಜಿ ಆರೋಪಿಸಿದರು.
ಪ್ರಣವಾನಂದ ಸ್ವಾಮೀಜಿ ಅರೇಮಲ್ಲಾಪುರ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಗಳಿಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಸದಸ್ಯರು ಅವರನ್ನು ಅನರ್ಹಗೊಳಿಸಲು ಮುಂದಾಗಿದ್ದಾರೆ ಎಂಬ ಆರೋಪಗಳು ಸಹ ಕೇಳಿಬಂದಿದ್ದವು. ಇದರಿಂದ ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ಆರೋಪವನ್ನು ಸ್ವಾಮೀಜಿ ತಳ್ಳಿಹಾಕಿದ್ದಾರೆ.
ಇದನ್ನೂ ಓದಿ : ಪರೇಶ್ ಮೇಸ್ತ ಕೊಲೆ ಆರೋಪಿಗೆ ವಕ್ಫ್ ಬೋರ್ಡ್ನಲ್ಲಿ ಸ್ಥಾನ: ನಾಯಕರ ಆರೋಪ-ಪ್ರತ್ಯಾರೋಪ