ಹಾವೇರಿ: ಮೊದಲ ಹಂತದ ಲಾಕ್ ಡೌನ್ ನಾಳೆ ಕೊನೆಗೊಳ್ಳಲಿದ್ದು, ಹೀಗಾಗಿ ಮದ್ಯದಂಗಡಿ ತೆರೆಯಲು ಸರ್ಕಾರ ಅವಕಾಶ ಕೊಡಬಹುದು ಎಂಬ ನಿರೀಕ್ಷೆಯಲ್ಲಿ ಮದ್ಯದಂಗಡಿಗಳ ತೆರೆಯಲು ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.
ಜಿಲ್ಲೆಯ ರಟ್ಟೀಹಳ್ಳಿ, ಬ್ಯಾಡಗಿ ಪಟ್ಟಣ ಸೇರಿದಂತೆ ಹಲವೆಡೆ ಎಂಎಸ್ಐಎಲ್ ಮದ್ಯದಂಗಡಿಗಳ ಮುಂದೆ ಜನಜಂಗುಳಿ ತಡೆಯಲು ಬಿದಿರುಕಟ್ಟಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಾಕ್ಸ್ಗಳನ್ನು ರಚನೆ ಮಾಡಲಾಗಿದೆ.
ಮದ್ಯದಂಗಡಿಗಳನ್ನು ತೆರೆಯುವ ಬಗ್ಗೆ ಇದುವರೆಗೆ ಸರ್ಕಾರ ಯಾವುದೇ ಸ್ಪಷ್ಟ ನಿರ್ದೇಶನ ನೀಡಿಲ್ಲ.