ಹಾನಗಲ್: ರಾಜ್ಯ ಸರ್ಕಾರದ ಆಡಳಿತ ಖಂಡಿಸಿ ಹಾನಗಲ್ ತಾಲೂಕು ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರ್ಕಾರ ಭೂ ಕಾಯ್ದೆಗಳಿಗೆ ತಿದ್ದುಪಡಿ ತರುವ ಮೂಲಕ ರೈತ ವಿರೋಧಿ ಆಡಳಿತ ನಡೆಸುತ್ತಿದೆ. ಜೊತೆಗೆ ಕೋವಿಡ್ 19 ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಜಿಲ್ಲೆಯಲ್ಲಿ ಕೃಷಿ ಸಚಿವರಿದ್ದರೂ ಸಹ ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ಸಿಗದಂತಾಗಿದೆ. ಇದು ರೈತ ವಿರೋಧಿ ಸರ್ಕಾರ ಎಂದು ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಆರೋಪಿಸಿದರು.
ಇನ್ನು ಪ್ರತಿಭಟನೆಯಲ್ಲಿ ಯಾಸೀರಖಾನ ಪಠಾಣ, ಆರ್.ಎಸ್.ಪಾಟೀಲ್, ಪುಟ್ಟಪ್ಪ ನರೆಗಲ್, ಮಂಜು ನಿಲಗುಂದ ಸೇರಿದಂತೆ ತಾಲೂಕು ಪಂಚಾಯತ್ ಶಿವಬಸಪ್ಪ ಪೂಜಾರ, ಸಿದ್ದನಗೌಡ ಮುಂತಾದವರಿದ್ದರು.