ಶಿಗ್ಗಾಂವಿ: ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ ಕನ್ನಡಪರ ಸಂಘಟನೆಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ತಾಲೂಕು ಆಡಳಿತದ ವಿರುದ್ಧ ಸಂಘಟನೆಯ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ.
ಪಟ್ಟಣದ ತಹಶೀಲ್ದಾರರ ಕಚೇರಿ ಮುಂದೆ ಜಮಾಯಿಸಿದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು, ನಿನ್ನೆ ರಾತ್ರಿ ರಾಜ್ಯೋತ್ಸವ ಕಾರ್ಯಕ್ರಮದ ತಯಾರಿಗೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರನ್ನು ಬಳಸಿಕೊಂಡು ಇವತ್ತು ಬೆಳಿಗ್ಗೆ ರಾಜ್ಯೋತ್ಸವ ಆಚರಣೆಗೆ ಕರೆಯದೆ ಕಡೆಗಣಿಸಿದೆ ಎಂದು ತಾಲೂಕು ಆಡಳಿತದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.