ಹಾವೇರಿ: 2019 ರಲ್ಲಿ ಸಂಭವಿಸಿದ ಅತಿವೃಷ್ಟಿಗೆ ಮನೆ ಸಂಪೂರ್ಣ ಹಾನಿಯಾಗಿದ್ರೂ ಈವರೆಗೂ ಮನೆ ನಿರ್ಮಾಣಕ್ಕೆ ಬೇಕಾದ ಐದು ಲಕ್ಷ ರೂಪಾಯಿ ಪರಿಹಾರದ ಹಣ ನೀಡ್ತಿಲ್ಲ ಎಂದು ಹಾವೇರಿ ತಾಲೂಕಿನ ಕೋಡಬಾಳ ಗ್ರಾಮದ ಬಸವಣ್ಣಯ್ಯ ಚರಂತಿಮಠ ಕುಟುಂಬದವರು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಕುಟುಂಬ ಸಮೇತ ಜಿಲ್ಲಾಡಳಿತ ಭವನದ ಮುಂದೆ ಚರಂತಿಮಠ ಕುಟುಂಬದವರು ಪ್ರತಿಭಟನೆ ನಡೆಸಿದರು. ಕಳೆದ ವರ್ಷದಲ್ಲಿ ಅತಿವೃಷ್ಟಿ ಸಂಭವಿಸಿದ ಸಮಯದಿಂದ ಈವರೆಗೂ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಕುಟುಂಬಸ್ಥರು ವಾಸವಾಗಿದ್ದರೂ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಮನೆ ನಿರ್ಮಾಣಕ್ಕೆ ಬೇಕಾದ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೆ ಜಿಲ್ಲಾಡಳಿತ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳು ಸಂಪೂರ್ಣ ಹಾಳಾಗಿರುವ ಮನೆಗೆ ಐದು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.