ಹಾವೇರಿ: ತಾಲೂಕಿನ ಗುತ್ತಲ ಪಟ್ಟಣದ ಆಶ್ರಯಮನೆ ಫಲಾನುಭವಿಗಳು ಮನೆ ಕಟ್ಟಿಕೊಳ್ಳಲು ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ, ಪಟ್ಟಣ ಪಂಚಾಯ್ತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಹಣ ಬಿಡುಗಡೆಗೆ ಪಟ್ಟಣ ಪಂಚಾಯ್ತಿ ಮೀನಾಮೇಷ ಎಣಿಸುತ್ತಿದೆ. ಈ ಕೂಡಲೇ ಹಣ ಬಿಡುಗಡೆ ಮಾಡುವ ಮೂಲಕ ತಮ್ಮ ಸಮಸ್ಯೆಗೆ ಸ್ಪಂಧಿಸುವಂತೆ ಫಲಾನುಭವಿಗಳು ಆಗ್ರಹಿಸಿದರು.
ಈಗಲಾದರೂ ಎಚ್ಚಿತ್ತು ಪಟ್ಟಣ ಪಂಚಾಯ್ತಿ ಮನೆಕಟ್ಟಿಕೊಳ್ಳಲು ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಬೇಕು ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.