ETV Bharat / state

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 15 -18 ರವರೆಗೆ ಪ್ರತಿಭಟನಾ ರ್‍ಯಾಲಿ - haveri latest news

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇದೇ 15 ರಿಂದ 18 ರವರೆಗೆ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸುವುದಾಗಿ ಕರ್ನಾಟಕ ಪರ ಸಂಘಟನೆಗಳ ಒಕ್ಕೂಟ ತಿಳಿಸಿದೆ.

Protest on 15-18  demanding to fulfillment of various demands
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 15-18ರವರೆಗೆ  ಪ್ರತಿಭಟನಾ ರ್‍ಯಾಲಿ : ಕರ್ನಾಟಕ ಪರ ಸಂಘಟನೆಗಳ ಒಕ್ಕೂಟ
author img

By

Published : Feb 6, 2020, 11:52 AM IST

ಹಾವೇರಿ: ರಾಜ್ಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ 15 ರಿಂದ 18 ರವರೆಗೆ ಬೃಹತ್ ಪ್ರತಿಭಟನಾ ರ್‍ಯಾಲಿಗೆ ನಿರ್ಧರಿಸಲಾಗಿದೆ. ಕರ್ನಾಟಕ ಪರ ಸಂಘಟನೆಗಳ ಒಕ್ಕೂಟ ಈ ವಿಷಯವನ್ನ ತಿಳಿಸಿದೆ.

ಹಾವೇರಿಯಲ್ಲಿ ಮಾತನಾಡಿದ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ ವಿಶ್ವನಾಥ್ ಜಿ.ಪಿ, ರ್‍ಯಾಲಿಯಲ್ಲಿ ಕನ್ನಡಪರ ಸಂಘಟನೆಗಳೆಲ್ಲ ಪಾಲ್ಗೊಳ್ಳಲಿದ್ದು, 18ಕ್ಕೆ ಬೆಂಗಳೂರು ತಲುಪಲಿದೆ ಎಂದು ತಿಳಿಸಿದರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 15-18ರವರೆಗೆ ಪ್ರತಿಭಟನಾ ರ್‍ಯಾಲಿ : ಕರ್ನಾಟಕ ಪರ ಸಂಘಟನೆಗಳ ಒಕ್ಕೂಟ

ಸುಮಾರು 600 ಕಿ.ಮೀ ರ್‍ಯಾಲಿ ಇದಾಗಲಿದ್ದು, ರಾಜ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಈ ರೀತಿಯ ರ್‍ಯಾಲಿ ನಡೆಸುತ್ತಿರುವುದಾಗಿ ತಿಳಿಸಿದರು. ಮಹದಾಯಿ ಯೋಜನೆ ತಕ್ಷಣ ಜಾರಿಗೆ, ನೆರೆ ಸಂತ್ರಸ್ತರಿಗೆ ತಕ್ಷಣವೇ ಪರಿಹಾರ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ನಾಮಕರಣ ಸೇರಿದಂತೆ ಒಕ್ಕೂಟ ವಿವಿಧ ಬೇಡಿಕೆಗಳನ್ನಿಟ್ಟುಕೊಂಡಿದೆ. ಈ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸುವುದಾಗಿ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.